ADVERTISEMENT

ಹೈ.ಕ ವಿಮೋಚನಾ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2015, 11:26 IST
Last Updated 5 ಸೆಪ್ಟೆಂಬರ್ 2015, 11:26 IST

ಕೊಪ್ಪಳ: ಹೈದರಾಬಾದ್-ಕರ್ನಾಟಕ ವಿಮೋಚನಾ ದಿನಾಚರಣೆ ಸೆ.17 ರಂದು ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ರಮಣದೀಪ್ ಚೌಧರಿ ಹೇಳಿದರು.

ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 8ಕ್ಕೆ ಜಿಲ್ಲಾಡಳಿತ ಭವನ ಆವರಣದಲ್ಲಿ ಧ್ವಜಾರೋಹಣ ನಡೆಯಲಿದೆ. 
ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9ಕ್ಕೆ ಸಚಿವ ಶಿವರಾಜ್ ಎಸ್. ತಂಗಡಗಿ ಧ್ವಜಾರೋಹಣ ನೆರವೇರಿಸುವರು. ಎನ್.ಸಿ.ಸಿ., ಪೊಲೀಸ್ ಇಲಾಖೆ, ಸ್ಕೌಟ್‌ ಮತ್ತು ಗೈಡ್ಸ್ ಮಕ್ಕಳಿಂದ ಪಥಸಂಚಲನ, ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಜಿ.ಎಲ್. ಪ್ರವೀಣ್ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಟಿ. ಕೊಟ್ರಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀಕಾಂತ್ ಬಾಸೂರ, ಉಪವಿಭಾಗಾಧಿಕಾರಿ ಪಿ.ಎಸ್.ಮಂಜುನಾಥ್ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.