ADVERTISEMENT

ಅಂಗವಿಕಲರಿಗೆ ಅವಕಾಶ ನೀಡಲು ಸಲಹೆ

​ಪ್ರಜಾವಾಣಿ ವಾರ್ತೆ
Published 2 ಜನವರಿ 2017, 10:41 IST
Last Updated 2 ಜನವರಿ 2017, 10:41 IST

ಕೊಪ್ಪ: ಅಂಗವಿಕಲರಿಗೆ ನಿರಂತರವಾಗಿ ಅನ್ಯಾಯವಾಗುತ್ತಿದೆ. ಅವರು ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ ಎಂದು ರಮಣ ಮಹರ್ಷಿ ಅಂಧರ ಪರಿಷತ್‌ ತಾಲ್ಲೂಕು ಸಂಯೋಜಕ ಮಾಹಂತೇಶ್ ಹಿರೇಮಠ್ ಅವರು ವಿಷಾದ ವ್ಯಕ್ತಪಡಿಸಿದರು.

ಸಮೀಪದ ಮರಳಿಗ ಸಮುದಾಯ ಭವದಲ್ಲಿ ಗ್ರಾಮ ಪಂಚಾಯಿತಿ ಮತ್ತು ವಿವಿಧ ಅಂಗವಿಕಲ ಸಂಘಟನೆಗಳ ವತಿಯಿಂದ ಈಚೆಗೆ ನಡೆದ ವಿಶ್ವ ವಿಕಲ ಚೇತನರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಅಂಗವಿಕಲರಿಗೆ ರಾಜಕೀಯ ಮೀಸಲಾತಿ ನೀಡದೆ ವಂಚಿಸಲಾಗುತ್ತಿದೆ. ಮಾಸಿಕ ವೇತನವನ್ನು ಸಕಾಲಕ್ಕೆ ಫಲಾನುಭವಿಗಳಿಗೆ ತಲುಪಿಸದೆ ಸಂಕಷ್ಟಕೀಡು ಮಾಡಿದ್ದಾರೆ ಎಂದರು.

ರೈತ ಮುಖಂಡ ಕೀಳಘಟ್ಟ ನಂಜುಂಡಯ್ಯ ಮಾತನಾಡಿದರು. ಗ್ರಾಮ ಪಂಚಾಯಿತಿ ವತಿಯಿಂದ 22 ಮಂದಿ ಅಂಗವಿಕಲರಿಗೆ ತಲಾ ₹ 2 ಸಾವರಿ ಪ್ರೋತ್ಸಾಹ ಧನ ನೀಡಲಾಯಿತು.

ಜಿಲ್ಲಾ ಪಂಚಾಯಿತಿ ಸದಸ್ಯ ಎಂ. ಮರಿಹೆಗಡೆ, ತಾಲ್ಲೂಕು ಪಂಚಾಯಿತಿ ಸದಸ್ಯ ಕೀಳಘಟ್ಟ ಸತೀಶ್‌, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪಾ ಜಯರಾಮು, ಪಿಡಿಒ ಚಂದ್ರು, ಪಂಚಾಯಿತಿ ಉಪಾಧ್ಯಕ್ಷ ಪುಟ್ಟಸ್ವಾಮಿ, ಸರ್ವೋದಯ ವಿಕಲಚೇತನರ ಸಂಘದ ಅಧ್ಯಕ್ಷ ಎಸ್‌.ಸಿ. ರಮೇಶ್‌, ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ಭಾರತಿ, ಗ್ರಾಮ ಪಂಚಾಯಿತಿಯ ಸದಸ್ಯರು, ಅಂಗವಿಕಲ ಸಂಘಟನೆಗಳ ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.