ADVERTISEMENT

ಅಭಿವೃದ್ಧಿ ಕೆಲಸಗಳ ಬಗ್ಗೆ ಜನರಿಗೆ ತಿಳಿಸಿ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2017, 5:41 IST
Last Updated 16 ಏಪ್ರಿಲ್ 2017, 5:41 IST

ಮಳವಳ್ಳಿ: ‘ನಾನು ಶಾಸಕನಾದ ನಂತರ ನಡೆದಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಮುಖಂಡರು, ಕಾರ್ಯಕರ್ತರು ಜನರಿಗೆ ತಿಳಿಸಬೇಕು’ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸಲಹೆ ನೀಡಿದರು.ಪಟ್ಟಣದ ಶಾಂತಿ ಸಮುದಾಯ ಭವನದಲ್ಲಿ ಶನಿವಾರ ಪಟ್ಟಣದ ಕಾಂಗ್ರೆಸ್ ಕಾರ್ಯಕರ್ತರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಏ. 20ರಂದು ₹ 72 ಕೋಟಿ ವೆಚ್ಚದಲ್ಲಿ ಪಟ್ಟಣಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.

₹ 593 ಕೋಟಿ ವೆಚ್ಚದ ಹನಿ ನೀರಾವರಿ ಯೋಜನೆ ಸೇರಿದಂತೆ ₹ 1,000 ಕೋಟಿ ವೆಚ್ಚದಲ್ಲಿ ವಿವಿಧ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನಡೆಯಲಿದೆ ಎಂದು ಹೇಳಿದರು.ಪುರಸಭೆ ವ್ಯಾಪ್ತಿಯ 33 ಎಕರೆ ನಿವೇಶನ ವಿತರಣೆಗೆ ಸಂಬಂಧಿಸಿ ಶೀಘ್ರವೇ ನ್ಯಾಯಾಲಯಕ್ಕೆ ದಾಖಲೆ ನೀಡುತ್ತೇನೆ’ ಎಂದು ಅವರು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ದೇವರಾಜು, ಪುಟ್ಟರಾಮು, ಪುರಸಭೆ ಸದಸ್ಯ ಶಿವಕುಮಾರ್, ಮನ್‌ಮುಲ್ ನಾಮನಿರ್ದೇಶಿತ ಸದಸ್ಯ ಸಿದ್ದೇಗೌಡ, ಮಲ್ಲಯ್ಯ, ಜಮೀಲ್‌ಪಾಷ, ಓಂಪ್ರಕಾಶ್, ಗಂಗರಾಜೇ ಅರಸ್, ಮಂಜುನಾಥ ಮಾತನಾಡಿದರು.

ADVERTISEMENT

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಆರ್‌.ಎನ್‌.ವಿಶ್ವಾಸ್, ಉಪಾಧ್ಯಕ್ಷ ಮಾದು, ಜಿಲ್ಲಾ ಪಂಚಾಯಿತಿ ಸದಸ್ಯ ಹನುಮಂತು, ಟಿಎಪಿಸಿಎಂಎಸ್‌ ಅಧ್ಯಕ್ಷ ಚೌಡೇಶ್‌, ಎಪಿಎಂಸಿ ಅಧ್ಯಕ್ಷ ಅಂಬರೀಶ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.