ADVERTISEMENT

ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ವ್ಯಕ್ತಿತ್ವ ಸುಧಾರಣೆ

ಜಿಲ್ಲಾ ಕ್ರೀಡಾಕೂಟ: ಎಸ್‌.ಬಿ. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮೀರಾ ಶಿವಲಿಂಗಯ್ಯ ಅಭಿಮತ

​ಪ್ರಜಾವಾಣಿ ವಾರ್ತೆ
Published 23 ಮಾರ್ಚ್ 2017, 6:05 IST
Last Updated 23 ಮಾರ್ಚ್ 2017, 6:05 IST

ಮಂಡ್ಯ: ‘ಕ್ರೀಡೆಯಲ್ಲಿ ಭಾಗವಹಿಸುವುದರಿಂದ ವ್ಯಕ್ತಿತ್ವ ಸುಧಾರಣೆ ಆಗುತ್ತದೆ. ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು’ ಎಂದು ಎಸ್‌.ಬಿ. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಮೀರಾ ಶಿವಲಿಂಗಯ್ಯ ಸಲಹೆ ನೀಡಿದರು.

ನಗರದ ಸರ್‌ಎಂ.ವಿ. ಕ್ರೀಡಾಂಗಣದಲ್ಲಿ ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ನೆಹರೂ ಯುವ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅನ್ನಪೂರ್ಣೇಶ್ವರಿ ಯುವತಿ ಮತ್ತು ಮಹಿಳಾ ಮಂಡಳಿ  ಹಾಗೂ ಚುಂಚಶ್ರೀ ತಾಲ್ಲೂಕು ಒಕ್ಕೂಟದಿಂದ ಬುಧವಾರ ನಡೆದ ಜಿಲ್ಲಾ ಕ್ರೀಡಾ ಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ವ್ಯಕ್ತಿತ್ವ ರೂಪಿಸುವಲ್ಲಿ ಕ್ರೀಡೆಯು ಮುಖ್ಯ ಪಾತ್ರ ವಹಿಸುತ್ತದೆ. ಕ್ರೀಡೆಗೆ ಯಾವುದೇ ಜಾತಿಯ ಮಿತಿಯಿಲ್ಲ.  ಗ್ರಾಮೀಣ ಭಾಗದಲ್ಲಿ ಕ್ರೀಡೆಗೆ ಹೆಚ್ಚು ಒತ್ತು ಕೊಡುವ ಅವಶ್ಯಕತೆ ಇದೆ. ಎಂದರು.

ರೋಟರಿ ಕ್ಲಬ್‌ ಅಧ್ಯಕ್ಷ ಎ.ಸಿ. ರಮೇಶ್‌ ಮಾತನಾಡಿ, ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಭಾವೈಕ್ಯ ಮೂಡಿಸುತ್ತದೆ. ಸರ್ಕಾರವು ಕ್ರೀಡಾ ಪಟುಗಳಿಗೆ ಹೆಚ್ಚು ಪ್ರೋತ್ಸಾಹ ನೀಡಬೇಕು. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ನೆರವಾಗಬೇಕು ಎಂದು ಮನವಿ ಮಾಡಿದರು.

ನಗರಸಭೆ ಅಧ್ಯಕ್ಷ ಹೊಸಹಳ್ಳಿ ಬೋರೇಗೌಡ ಅಧ್ಯಕ್ಷತೆ ವಹಿಸಿದ್ದರು. ಸ್ಥಾಯಿ ಸಮಿತಿ ಅಧ್ಯಕ್ಷ ಎಸ್‌.ಕೆ. ಶಿವಪ್ರಕಾಶ್‌ ಬಾಬು, ಸದಸ್ಯ ಎಂ.ಪಿ. ಅರುಣ್‌ಕುಮಾರ್‌, ಜಿಲ್ಲಾ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಬಿ.ವಿ. ನಂದೀಶ್‌, ನೆಹರೂ ಯುವ ಕೇಂದ್ರದ ಎಸ್‌. ಸಿದ್ದರಾಮಪ್ಪ, ಅನುಪಮಾ, ಕೋಮಲಾ ಇದ್ದರು.

*
ವಿದ್ಯಾರ್ಥಿಗಳು ಓದಿನ ಜತೆಗೆ ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವುದರಿಂದ ‘ಮಾನಸಿಕ’ ಶಕ್ತಿ ಹೆಚ್ಚುತ್ತದೆ.
-ಹೊಸಹಳ್ಳಿ ಬೋರೇಗೌಡ,
ಅಧ್ಯಕ್ಷ, ನಗರಸಭೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT