ADVERTISEMENT

‘ಪಟ್ಟಣದ ಅಭಿವೃದ್ಧಿಗೆ ₹ 55 ಕೋಟಿ’

​ಪ್ರಜಾವಾಣಿ ವಾರ್ತೆ
Published 19 ಮಾರ್ಚ್ 2018, 11:29 IST
Last Updated 19 ಮಾರ್ಚ್ 2018, 11:29 IST
ಪುರಸಭೆಯ ವಿವಿಧ ಅಭಿವೃದ್ಧಿಗೆ ಕಾಮಗಾರಿಗಳಿಗೆ ಸುಮಾರು ₹ 55 ಕೋಟಿ ವಿಶೇಷ ಅನುದಾನವನ್ನು ನಗರ ಮೂಲ ಸೌಕರ್ಯ ಮತ್ತು ಹಣಕಾಸು ನಿಗಮದ ವತಿಯಿಂದ ಮುಖ್ಯಮಂತ್ರಿಗಳ ಮನವೊಲಿಸಿ ಬಿಡುಗಡೆ ಮಾಡಿಸಿರುವುದಾಗಿ ರಾಜ್ಯ ನಗರ ಮೂಲ ಸೌಕರ್ಯ ಮತ್ತು ಹಣಕಾಸು ನಿಗಮದ ರಾಜ್ಯಾಧ್ಯಕ್ಷ ಎಂ.ಡಿ.ಕೃಷ್ಣಮೂರ್ತಿ ತಿಳಿಸಿದರು.
ಪುರಸಭೆಯ ವಿವಿಧ ಅಭಿವೃದ್ಧಿಗೆ ಕಾಮಗಾರಿಗಳಿಗೆ ಸುಮಾರು ₹ 55 ಕೋಟಿ ವಿಶೇಷ ಅನುದಾನವನ್ನು ನಗರ ಮೂಲ ಸೌಕರ್ಯ ಮತ್ತು ಹಣಕಾಸು ನಿಗಮದ ವತಿಯಿಂದ ಮುಖ್ಯಮಂತ್ರಿಗಳ ಮನವೊಲಿಸಿ ಬಿಡುಗಡೆ ಮಾಡಿಸಿರುವುದಾಗಿ ರಾಜ್ಯ ನಗರ ಮೂಲ ಸೌಕರ್ಯ ಮತ್ತು ಹಣಕಾಸು ನಿಗಮದ ರಾಜ್ಯಾಧ್ಯಕ್ಷ ಎಂ.ಡಿ.ಕೃಷ್ಣಮೂರ್ತಿ ತಿಳಿಸಿದರು.   

ಕೆ.ಆರ್.ಪೇಟೆ: ಪುರಸಭೆಯ ವಿವಿಧ ಅಭಿವೃದ್ಧಿಗೆ ಕಾಮಗಾರಿಗಳಿಗೆ ಸುಮಾರು ₹ 55 ಕೋಟಿ ವಿಶೇಷ ಅನುದಾನವನ್ನು ನಗರ ಮೂಲ ಸೌಕರ್ಯ ಮತ್ತು ಹಣಕಾಸು ನಿಗಮದ ವತಿಯಿಂದ ಮುಖ್ಯಮಂತ್ರಿಗಳ ಮನವೊಲಿಸಿ ಬಿಡುಗಡೆ ಮಾಡಿಸಿರುವುದಾಗಿ ರಾಜ್ಯ ನಗರ ಮೂಲ ಸೌಕರ್ಯ ಮತ್ತು ಹಣಕಾಸು ನಿಗಮದ ರಾಜ್ಯಾಧ್ಯಕ್ಷ ಎಂ.ಡಿ.ಕೃಷ್ಣಮೂರ್ತಿ ತಿಳಿಸಿದರು.

ಪಟ್ಟಣದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, 10 ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಒಳಚರಂಡಿ ಯೋಜನೆ ಸಂಪೂರ್ಣಗೊಳಿಸಲು ₹ 22.26 ಕೋಟಿ, ಹೇಮಗಿರಿ ಬಳಿಯ ಹೇಮಾವತಿ ನದಿಯಿಂದ ಕೆ.ಆರ್.ಪೇಟೆ ಮತ್ತು ಹೊಸಹೊಳಲು ಅವಳಿ ಪಟ್ಟಣಗಳಿಗೆ ಸಮರ್ಪಕವಾಗಿ ಕುಡಿಯುವ ನೀರು ಸರಬರಾಜು ಮಾಡಲು ಅನುಕೂಲವಾಗುವಂತೆ ಮೂರನೇ ಹಂತದ ಕುಡಿಯುವ ನೀರಿನ ಯೋಜನೆಗೆ ₹ 26 ಕೋಟಿ ಹಾಗೂ ಪುರಸಭೆಯ ವಾಣಿಜ್ಯ ಸಮುಚ್ಛಯ ಮತ್ತು ಹೈಟೆಕ್ ಕಚೇರಿಯ ಕಟ್ಟಡದ ನಿರ್ಮಾಣಕ್ಕಾಗಿ ₹ 6 ಕೋಟಿ ವಿಶೇಷ ಅನುದಾನವನ್ನು ಬಿಡುಗಡೆಯಾಗಿದೆ ಎಂದು ವಿವರಿಸಿದರು.

ಈ ಮೂರು ಯೋಜನೆಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಭೂಮಿಪೂಜೆಯನ್ನು ನೆರವೇರಿಸಲಾಗುವುದು ಎಂದು ವಿವರಿಸಿದರು. ಪಟ್ಟಣದ ಜನತೆಗೆ ಅಗತ್ಯ ಮೂಲ ಸೌಕರ್ಯ ಒದಗಿಸಲು ನೆರವಾದ ಮುಖ್ಯಮಂತ್ರಿ ಸಿದ್ಧರಾಮಯ್ಯ, ನಗರಾಭಿವೃದ್ಧಿ ಸಚಿವ ಆರ್.ರೋಷನ್ ಬೇಗ್ ರಾಜ್ಯಸಭಾ ಸದಸ್ಯ ಕೆ.ರೆಹಮಾನ್ ಖಾನ್ ಅವರಿಗೆ ಪಟ್ಟಣದ ನಾಗರಿಕರ ಪರವಾಗಿ ಕೃತಜ್ಞತೆ ಅರ್ಪಿಸುವುದಾಗಿ ಹೇಳಿದರು.

ADVERTISEMENT

ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಕೆ.ಬಿ.ಚಂದ್ರಶೇಖರ್, ಕಾಂಗ್ರೆಸ್ ತಾಲ್ಲೂಕು ವೀಕ್ಷಕ ಮನ್ಸೂರ್ ಅಲಿಖಾನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಿಕ್ಕೇರಿ ಸುರೇಶ್, ಜಿಲ್ಲಾ ಪಂಚಾಯಿತಿ ಸದಸ್ಯ ಕೋಡಿಮಾರನಹಳ್ಳಿ ದೇವರಾಜು, ಜಿ.ಪಂ.ಮಾಜಿ ಉಪಾಧ್ಯಕ್ಷ ಬೇಲದಕೆರೆ ಪಾಪೇಗೌಡ, ಎಸ್.ಅಂಬರೀಷ್, ಪುರಸಭೆ ಮುಖ್ಯಾಧಿಕಾರಿ ಮೂರ್ತಿ, ಎಂಜಿನಿಯರ್ ಕುಮಾರ್, ಆರೋಗ್ಯ ಪರಿವೀಕ್ಷಕ ಎಂ.ಎಸ್.ಮೂರ್ತಿ, ಪುರಸಭಾ ಸದಸ್ಯರಾದ ಎಚ್.ಕೆ.ಅಶೋಕ್, ಡಿ.ಪ್ರೇಮಕುಮಾರ್, ನಂಜುಂಡಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.