ADVERTISEMENT

ಫೆ.10ಕ್ಕೆ ತಾಲ್ಲೂಕು ಸಾಹಿತ್ಯ ಸಮ್ಮೇಳನ

ಕಸಾಪ ಪದಾಧಿಕಾರಿಗಳು, ಮುಖಂಡರ ಸಭೆಯಲ್ಲಿ ತೀರ್ಮಾಣ

​ಪ್ರಜಾವಾಣಿ ವಾರ್ತೆ
Published 2 ಜನವರಿ 2017, 10:40 IST
Last Updated 2 ಜನವರಿ 2017, 10:40 IST

ಶ್ರೀರಂಗಪಟ್ಟಣ: ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಫೆ.10ರಂದು ನಡೆಯಲಿದೆ ಎಂದು ಕಸಾಪ ತಾಲ್ಲೂಕು ಘಟಕದ ಅಧ್ಯಕ್ಷ ಸಿದ್ದಲಿಂಗು ತಿಳಿಸಿದರು. ಪಟ್ಟಣದಲ್ಲಿ ಶನಿವಾರ ನಡೆದ ಕಸಾಪ ಪದಾಧಿಕಾರಿಗಳ ಸಭೆಯಲ್ಲಿ  ಮಾತನಾಡಿದರು.

ತಾಲ್ಲೂಕಿನ ಬಾಬುರಾಯನ ಕೊಪ್ಪಲು ಅಥವಾ ಪಟ್ಟಣದ ಟಿಎಪಿಸಿಎಂಎಸ್‌ ಭವನದಲ್ಲಿ ಸಮ್ಮೇಳನ ನಡೆಸಲಾಗುತ್ತದೆ. ಸಮ್ಮೇಳನ ಅಧ್ಯಕ್ಷರ ಆಯ್ಕೆ ವಿಚಾರ ಚರ್ಚೆಯ ಹಂತದಲ್ಲಿದೆ. ಸದ್ಯಕ್ಕೆ ಮೂವರು ಹೆಸರು ಪ್ರಸ್ತಾವಾಗಿದೆ. ಮುಂದಿನ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಯಶಸ್ವಿಗೊಳಿಸಲು ವಿವಿಧ ಸಮಿತಿಗಳನ್ನು ರಚಿಸಲಾಗುವುದು. ಸಾಹಿತ್ಯ ಪರಿಷತ್‌ ಪದಾಧಿಕಾರಿಗಳು, ಕನ್ನಡಪರ ಸಂಘಟನೆ­ಗಳು, ರೈತಪರ ಇತರ ಪ್ರಗತಿ­ಪರ ಸಂಘಟನೆಗಳ ಕಾರ್ಯಕರ್ತರನ್ನು ಒಳಗೊಂಡ ಸಮಿತಿಗಳನ್ನು ರಚಿಸಲಾಗುವುದು ಎಂದು ತಿಳಿಸಿದರು. ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಸಿ. ಮರಿಯಪ್ಪ, ಗಾಂಧಿವಾದಿ ಡಾ.ಬಿ. ಸುಜಯಕುಮಾರ್‌ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್‌ ಕಾರ್ಯಕ್ರಮಗಳು ಗ್ರಾಮೀಣ ಪ್ರದೇಶದ ಜನರಿಗೆ ಮುಟ್ಟಬೇಕು.

ಆ ದಿಸೆಯಲ್ಲಿ ಪರಿಣಾಮಕಾರಿ ಕಾರ್ಯಕ್ರಮಗಳನ್ನು ರೂಪಿಸಿ ಎಂದು ಸಲಹೆ ನೀಡಿದರು. ಕಸಾಪ ಗೌರವ ಕಾರ್ಯದರ್ಶಿ ಉಮಾಶಂಕರ್‌, ಜಿಲ್ಲಾ ಉಪಾಧ್ಯಕ್ಷ ಧನಂಜಯ, ನಗರ ಘಟಕದ ಅಧ್ಯಕ್ಷ ಕೆ.ಬಿ. ಬಸವರಾಜು, ಎಂ.ಬಿ. ಕುಮಾರ್‌, ಪುರಸಭೆ ಸದಸ್ಯ ಡಿ. ಸಿದ್ದರಾಜು ಇತರರು ಇದ್ದರು. ಇದೇ ವೇಳೆ ಕಸಾಪ ಹೊರ ತಂದಿರುವ 2017ನೇ ವರ್ಷದ ದಿನದರ್ಶಿಕೆ ಬಿಡುಗಡೆ ಮಾಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.