ADVERTISEMENT

‘ಮಹದಾಯಿ: ಸುಳ್ಳು ಹೇಳುತ್ತಿರುವ ಬಿಜೆಪಿ’

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2017, 8:30 IST
Last Updated 9 ಸೆಪ್ಟೆಂಬರ್ 2017, 8:30 IST

ಮಂಡ್ಯ: ಮಹದಾಯಿ ವಿಚಾರದಲ್ಲಿ ಬಿಜೆಪಿ ನಾಯಕರು ಸುಳ್ಳು ಹೇಳುತ್ತಿದ್ದಾರೆ. ಕಳೆದ ಬಾರಿ ನಡೆದ ಸಭೆಯಲ್ಲಿ ಗೋವಾ, ಮಹಾರಾಷ್ಟ್ರ ಮುಖ್ಯಮಂತ್ರಿಗಳನ್ನು ಒಪ್ಪಿಸಿ ಸಂಧಾನಕ್ಕೆ ವೇದಿಕೆ ಸಿದ್ಧಪಡಿಸುವುದಾಗಿ ಹೇಳಿದ್ದರು. ಆದರೆ, ಇಷ್ಟು ದಿನವಾದರೂ ಆ ಬಗ್ಗೆ ಮಾತನಾಡುತ್ತಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಆರೋಪಿಸಿದರು.

‘ಅಮೃತ್‌’ ಯೋಜನೆ ಕಾಮಗಾರಿಗೆ ಚಾಲನೆ ನೀಡಲು ಆಗಮಿಸಿದ ಸಂದರ್ಭದಲ್ಲಿ ತೂಬಿನಕೆರೆ ಹೆಲಿಪ್ಯಾಡ್‌ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದರು. ‘ಪ್ರಧಾನಮಂತ್ರಿ ಮಧ್ಯಪ್ರವೇ ಶಿಸಿದರೆ ಮಾತ್ರ ಮಹದಾಯಿ ಸಮಸ್ಯೆ ಬಗೆಹರಿಯುತ್ತದೆ. ಈ ಬಗ್ಗೆ ಪ್ರಧಾನಿಗೆ ಮೂರು ಬಾರಿ ಪತ್ರ ಬರೆದಿದ್ದೇನೆ. ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯ ಬಿಜೆಪಿ ಮುಖಂಡರು ಪ್ರಧಾನಿ ಮಧ್ಯಸ್ಥಿಕೆ ವಹಿಸಲು ಮನವೊಲಿಸಬೇಕು’ ಎಂದು ಆಗ್ರಹಿಸಿದರು.

‘ಗೌರಿ ಲಂಕೇಶ್‌ ಹತ್ಯೆಯ ತನಿಖೆ ಆರಂಭವಾಗಿ ಎರಡು ದಿನವಾಗಿದ್ದು ಇಂತಿಷ್ಟೇ ದಿನಗಳಲ್ಲಿ ತನಿಖೆ ಮುಗಿಯುತ್ತದೆ ಎಂದು ಹೇಳಲಾಗದು. ನಿಷ್ಪಕ್ಷಪಾತ ತನಿಖೆ ನಡೆಸಲು ಎಸ್‌ಐಟಿ ತಂಡಕ್ಕೆ ಸೂಚನೆ ನೀಡಲಾಗಿದೆ. ಲಂಕೇಶ್‌ ಕುಟುಂಬದ ಸದಸ್ಯರು ಆತ್ಮೀಯರಾಗಿದ್ದು ಅವರ ಜೊತೆ ಮಾತನಾಡಿ ತನಿಖೆಯ ಬಗ್ಗೆ ಮಾಹಿತಿ ನೀಡುತ್ತೇನೆ’ ಎಂದರು.

ADVERTISEMENT

ಮೆಗಾ ಡೇರಿಗೆ ಶಂಕುಸ್ಥಾಪನೆ: ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಗ್ರಾಮದ ಮಂಡ್ಯ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ (ಮನ್‌ಮುಲ್‌) ಆವರಣದಲ್ಲಿ ₹ 227 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಮೆಗಾಡೇರಿ ಕಾಮಗಾರಿಗೆ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.