ADVERTISEMENT

ಮಹದಾಯಿ ಹೋರಾಟ ಬೆಂಬಲಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2017, 5:44 IST
Last Updated 29 ಡಿಸೆಂಬರ್ 2017, 5:44 IST

ಮದ್ದೂರು: ಮಹದಾಯಿ ನೀರಿನ ಹಂಚಿಕೆ ವಿವಾದ ಕುರಿತ ಹೋರಾಟ ಬೆಂಬಲಿಸಿ ಕದಂಬ ಸೇನೆ ಹಾಗೂ ದಲಿತ ಸಂಘರ್ಷ ಸಮಿತಿ ಸದಸ್ಯರು ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ಗುರುವಾರ ಪ್ರತಿಭಟಿಸಿದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಿರ್ಲಕ್ಷ್ಯದ ವಿರುದ್ಧ ಘೋಷಣೆ ಕೂಗಿದ ಅವರು, ನದಿ ನೀರಿನ ಹಂಚಿಕೆ ವಿವಾದ ಬಗೆಹರಿಸಲು ರಾಜ್ಯದ ಸಂಸದರು ಪಕ್ಷಭೇದ ಮರೆತು ಪ್ರಧಾನಿ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದರು. ರಾಷ್ಟ್ರಪತಿ ಅವರು ಈ ವಿಷಯದಲ್ಲಿ ಮಧ್ಯೆ ಪ್ರವೇಶಿಸಬೇಕು ಎಂದು ಆಗ್ರಹಿಸಿದರು. ತಾಲ್ಲೂಕು ಶಿರೆಸ್ತೆದಾರ್ ಅವರಿಗೆ ಮನವಿ ಸಲ್ಲಿಸಿದರು.

ಕದಂಬ ಸೇನೆ ರಾಜ್ಯ ಘಟಕದ ಅಧ್ಯಕ್ಷ ಬೇಕ್ರಿ ರಮೇಶ್, ದಸಂಸ ರಾಜ್ಯ ಸಂಚಾಲಕ ಅಂದಾನಿ ಸೋಮನಹಳ್ಳಿ, ಸತ್ಯಪ್ಪ, ಅಣ್ಣೂರು ರಾಜಣ್ಣ, ಹೊಂಬಾಳೆ, ರಂಗಸ್ವಾಮಿ, ರಾಜೇಶ್, ಶಿವಲಿಂಗಯ್ಯ, ನಾಗೇಶ್, ಬೋರಾಪುರ ಲೋಕೇಶ್, ನೀಲಮ್ಮ, ವೆಂಕಟಲಕ್ಷ್ಮಮ್ಮ ಹಾಗೂ ಇತರ ಪ್ರಮುಖರು ಈ ಸಂದರ್ಭದಲ್ಲಿ ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.