ADVERTISEMENT

ಮಹಿಳೆಯರಿಂದ ಖಾಲಿ ಬಿಂದಿಗೆ ಪ್ರದರ್ಶನ

​ಪ್ರಜಾವಾಣಿ ವಾರ್ತೆ
Published 16 ಜುಲೈ 2017, 6:53 IST
Last Updated 16 ಜುಲೈ 2017, 6:53 IST

ಕೆ.ಆರ್.ಪೇಟೆ: ತಾಲ್ಲೂಕಿನ ನಾರ್ಗೋನಹಳ್ಳಿ ಗ್ರಾಮದಲ್ಲಿ 20 ದಿನಗಳಿಂದ ನೀರಿಗೆ ಹಾಹಾಕಾರ ಉಂಟಾಗಿದೆ. ತಕ್ಷಣ ನೀರು ಪೂರೈಕೆಗೆ ಕ್ರಮ ವಹಿಸಬೇಕು ಎಂದು ಆಗ್ರಹಿಸಿ ಗ್ರಾಮದ ನೂರಾರು ಮಹಿಳೆಯರು ಖಾಲಿ ಬಿಂದಿಗೆ ಹಿಡಿದು ಬಳ್ಳೇಕೆರೆ ಗ್ರಾಮ ಪಂಚಾಯಿತಿ ಕಚೇರಿಗೆ ಶನಿವಾರ ಮುತ್ತಿಗೆ ಹಾಕಿದರು.

ಗ್ರಾಮದಲ್ಲಿ 400 ಕ್ಕೂ ಅಧಿಕ ಕುಟುಂಬಗಳಿವೆ. ಕುಡಿಯುವ ನೀರು ಸರಬರಾಜು ಯಂತ್ರಗಳು ಕೆಟ್ಟಿದ್ದು, ಗ್ರಾಮ ಪಂಚಾಯಿತಿ ನೀರು ಪೂರೈಕೆ ಕಾರ್ಯವನ್ನು  ಸಮರ್ಪಕವಾಗಿ ನಿರ್ವಹಿಸುತ್ತಿಲ್ಲ. ಇದರಿಂದ ಗ್ರಾಮದ ಜನ ಕುಡಿಯುವ ನೀರು ಸಿಗದೆ ತೀವ್ರ ತೊಂದರೆಗೆ ಸಿಲುಕಿದ್ದಾರೆ. ದೂರದ ಬಳ್ಳೇಕರೆ, ಕಾಮನಹಳ್ಳಿ ಗ್ರಾಮಗಳಿಗೆ ಹೋಗಿ ನೀರು ತರುವ ಸ್ಥಿತಿ ಉಂಟಾಗಿದೆ ಎಂದು ಅಳಲು ತೋಡಿಕೊಂಡರು.

ಗ್ರಾಮ ಪಂಚಾಯಿತಿ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕು. ಶಾಶ್ವತ ಪರಿಹಾರ ರೂಪಿಸಬೇಕು ಎಂದು ಆಗ್ರಹಿಸಿದರು. ಗ್ರಾಮ ಪಂಚಾಯಿತಿ ಸದಸ್ಯರಾದ ಚನ್ನಕೇಶವ, ಜಯಲಕ್ಷ್ಮಿ ಲೋಕೇಶ್ ಮತ್ತು ಗ್ರಾಮದ ಕಾವೇರಮ್ಮ ಸ್ತ್ರೀಶಕ್ತಿ ಸ್ವಸಹಾಯ ಸಂಘದ ಸದಸ್ಯರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ADVERTISEMENT

ಸ್ಥಳಕ್ಕೆ ಬೇಟಿ ನೀಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತಾ, ಪಿಡಿಒ ಎಂ.ಮಲ್ಲೇಶ್  ಪ್ರತಿಭಟನಾಕಾರರ ಮನವಿಯನ್ನು ಆಲಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.