ADVERTISEMENT

ರಾಜ್ಯ ಸರ್ಕಾರದ ವಿರುದ್ಧ ಹೋರಾಟ

​ಪ್ರಜಾವಾಣಿ ವಾರ್ತೆ
Published 26 ಜುಲೈ 2017, 7:06 IST
Last Updated 26 ಜುಲೈ 2017, 7:06 IST

ಶ್ರೀರಂಗಪಟ್ಟಣ: ಜನ ವಿರೋಧಿ ನೀತಿ ಅನುಸರಿಸುತ್ತಿರುವ ರಾಜ್ಯ ಸರ್ಕಾರ ಜನಾಭಿಪ್ರಾಯ ರೂಪಿಸಿ ಬಿಜೆಪಿ ಸಂಘಟಿತ ಹೋರಾಟ ರೂಪಿಸಲಿದೆ ಎಂದು ಪಕ್ಷದ ಜಿಲ್ಲಾ ಉಸ್ತುವಾರಿ ತೇಜಸ್ವಿನಿ ರಮೇಶ್‌ ಹೇಳಿದರು. ತಾಲ್ಲೂಕಿನ ಅರಕೆರೆ ಗ್ರಾಮದಲ್ಲಿ ಮಂಗಳವಾರ ನಡೆದ ಬಿಜೆಪಿ ಶಕ್ತಿ ಕೇಂದ್ರ ಹಾಗೂ ಬಿಎಲ್‌–1 ಮತ್ತು ಬಿಎಲ್‌–2 ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯದ ಕಾಂಗ್ರೆಸ್‌ ಸರ್ಕಾರ ಜನರ ನಿರೀಕ್ಷೆಯನ್ನು ಹುಸಿಗೊಳಿಸಿದೆ. ರೈತರನ್ನು ಸಂಕಷ್ಟಕ್ಕೆ ದೂಡಿದೆ ಎಂದು ದೂರಿದರು.

ಜನ, ಜಾನುವಾರುಗಳಿಗೆ ಕುಡಿಯುವ ನೀರು ಇತರ ಮೂಲ ಸೌಕರ್ಯ ಕಲ್ಪಿಸಲು ವಿಫಲವಾಗಿದೆ. ಮತ ಪಡೆಯುವ ಉದ್ದೇಶದಿಂದ ತುಷ್ಠೀಕರಣ ನೀತಿ ಅನುಸರಿಸುತ್ತಿದೆ. ಕೇಂದ್ರ ಸರ್ಕಾರದ ಯೋಜನೆಗಳನ್ನು ತನ್ನದೆಂದು ಹೇಳಿಕೊಳ್ಳುತ್ತಿದೆ. ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸಲು ಜನಾಂದೋಲನ ರೂಪಿಸಲಾಗುವುದು ಎಂದು ಹೇಳಿದರು,

ಬಿಜೆಪಿ ಕ್ಷೇತ್ರಾಧ್ಯಕ್ಷ ಟಿ. ಶ್ರೀಧರ್‌ ಮಾತನಾಡಿ, ಗ್ರಾಮೀಣ ಜನರು ಕೂಡ ಬಿಜೆಪಿ ಪಕ್ಷದ ಬಗ್ಗೆ ಒಲವು ತೋರಿಸುತ್ತಿದ್ದಾರೆ. ವಿದ್ಯಾವಂತರು ಬಿಜೆಪಿಯ ತತ್ವ ಮತ್ತು ಸಿದ್ದಾಂತಗಳು ಹಾಗೂ ನರೇಂದ್ರ ಮೋದಿ ಅವರ ನಾಯಕತ್ವವನ್ನು ಮೆಚ್ಚಿಕೊಂಡಿದ್ದಾರೆ.

ADVERTISEMENT

ಶಕ್ತಿ ಕೇಂದ್ರದ ಪದಾಧಿಕಾರಿಗಳು ಬೂತ್‌ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿ ಮುಂದಿನ ವಿಧಾನಸಭೆ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳಬೇಕು ಎಂದರು. ಬಿಜೆಪಿ ಪ್ರಧಾನ ಕಾರ್ಯದರ್ಶಿ ಎಸ್‌.ಕೆ. ಮಂಜುನಾಥ್‌, ಜಿಲ್ಲಾ ಉಪಾಧ್ಯಕ್ಷ ಸತೀಶ್‌, ರೈತ ಮೋರ್ಚಾ ಅಧ್ಯಕ್ಷ ರಾಜೂಗೌಡ, ತಾಲ್ಲೂಕು ಉಪಾಧ್ಯಕ್ಷ ಪೀಹಳ್ಳಿ ರಮೇಶ್‌, ಎಸ್‌ಸಿ ಮೋರ್ಚಾ ಅಧ್ಯಕ್ಷ ಸಿದ್ದಯ್ಯ, ಕೆ.ಆರ್‌. ಸೊಸೈಟಿ ಉಪಾಧ್ಯಕ್ಷ ಉಮೇಶ್‌ಕುಮಾರ್‌, ಶಕ್ತಿ ಕೇಂದ್ರದ ಅಧ್ಯಕ್ಷ ಎ.ಎಂ. ಜಗದೀಶ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.