ADVERTISEMENT

ಸ್ನೇಹಿತರ ನಡುವೆ ಜಗಳ: ಕೊಲೆಯಲ್ಲಿ ಅಂತ್ಯ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2017, 9:58 IST
Last Updated 10 ಫೆಬ್ರುವರಿ 2017, 9:58 IST
ಸ್ನೇಹಿತರ ನಡುವೆ ಜಗಳ: ಕೊಲೆಯಲ್ಲಿ ಅಂತ್ಯ
ಸ್ನೇಹಿತರ ನಡುವೆ ಜಗಳ: ಕೊಲೆಯಲ್ಲಿ ಅಂತ್ಯ   

ಮಂಡ್ಯ: ಜಿಲ್ಲೆಯ ಪಾಂಡವಪುರ ಪಟ್ಟಣದಲ್ಲಿ ಸ್ನೇಹಿತರ ನಡುವೆ ಜಗಳ ನಡೆದು ಸ್ನೇಹಿತನನ್ನು ಚಾಕುವಿನಿಂದ ಚುಚ್ಚಿ ಕೊಲೆ ಮಾಡಿದ ಘಟನೆ ಶುಕ್ರವಾರ ನಡೆದಿದೆ.

ರುಕ್ಸಾನಾ (19) ಎಂಬುವವನೇ ಕೊಲೆಯಾದ ಯುವಕ. ಗಾಯಗೊಂಡ ಅವನನ್ನು ಪಟ್ಟಣದ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

ಸ್ನೇಹಿತರೊಂದಿಗೆ ಮಾತಿನ ವಾಗ್ವಾದ ನಡೆದಿದ್ದು, ಆ ಸಂದರ್ಭದಲ್ಲಿ ಸ್ನೇಹಿತ ಸೋಹೆಲ್‌ ಎಂಬುವವನು ಚಾಕಿವಿನಿಂದ ಚುಚ್ಚಿ ಕೊಲೆ ಮಾಡಿದ್ದಾನೆ ಎಂದು ಪಟ್ಟಣ ಪೊಲೀಸ್‌ ಠಾಣೆಗೆ ರುಕ್ಸಾನಾ ಪೋಷಕರು ದೂರು ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.