ADVERTISEMENT

ಹೈನುಗಾರಿಕೆಗೆ ಆದ್ಯತೆ ನೀಡಲು ಸಲಹೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2017, 9:15 IST
Last Updated 3 ಜನವರಿ 2017, 9:15 IST

ಮಳವಳ್ಳಿ: ಬರದ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗೆ ಹಿನ್ನಡೆಯಾಗಿರುವುದರಿಂದ ರೈತರು ಹೈನುಗಾರಿಕೆ ಮೂಲಕ ಆರ್ಥಿಕ ಮಟ್ಟ ಸುಧಾರಿಸಿಕೊಳ್ಳಬಹುದು ಎಂದು ಜಿಲ್ಲಾ ಪಂಚಾಯಿತಿ ವಿರೋಧ ಪಕ್ಷದ ನಾಯಕ ಹನುಮಂತು ಸಲಹೆ ನೀಡಿದರು.

ತಾಲ್ಲೂಕಿನ ದಡದಪುರ ಬಳಿ ಇರುವ ಬಸವೇಶ್ವರ ಸಮುದಾಯ ಭವನದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಈಚೆಗೆ ನಡೆದ ಪಶು ಸಂಗೋಪನೆ ಬಗ್ಗೆ ವಿಚಾರ ಸಂಕಿರಣ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ನಡೆಯುತ್ತಿರುವ ಕಾರ್ಯಕ್ರಮಗಳು, ಗ್ರಾಮಗಳ ಅಭಿವೃದ್ಧಿಗೆ ಸಹಕಾರಿಯಾಗಿವೆ ಎಂದು ಅವರು ಅಭಿಪ್ರಾಯಪಟ್ಟರು.ಗ್ರಾಮಾಂತರ ಪೊಲೀಸ್‌ ಠಾಣೆ ಸಬ್ಇನ್‌ಸ್ಪೆಕ್ಟರ್ ರವಿಕುಮಾರ್ ಮಾತನಾಡಿ, ಹಸು, ಮೇಕೆ, ಕುರಿ ಸಾಕಣೆಯಿಂದ ಆರ್ಥಿಕವಾಗಿ ಸದೃಢರಾಗಬಹುದು ಎಂದು ಹೇಳಿದರು.

ಬಂಡೂರು ಕುರಿ ಸಂವರ್ಧನ ಕೇಂದ್ರದ ಸಹಾಯಕ ನಿರ್ದೇಶಕ ಡಾ.ವೀರಭದ್ರಯ್ಯ, ಪಶು ವೈದ್ಯ ಡಾ.ಅನಿಲ್‌ಕುಮಾರ್, ಪ್ರಗತಿಪರ ರೈತರಾದ ದೊಡ್ಡಯ್ಯ, ಹೇಮಲತಾ, ಶೇಖರ್  ವಿಚಾರ ಮಂಡಿಸಿದರು.

ತಾಲ್ಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ದೊಡ್ಡಯ್ಯ, ದಡದಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾಗರಾಜು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಚಂದ್ರಹಾಸ್, ರಾಮಣ್ಣ ಈ ಸಂದರ್ಭದಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.