ADVERTISEMENT

ಮರಗಳ ಹನನ ಖಂಡಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2018, 6:32 IST
Last Updated 6 ಫೆಬ್ರುವರಿ 2018, 6:32 IST

ಮದ್ದೂರು: ಪಟ್ಟಣದ ಜಿಲ್ಲಾ ಪಂಚಾಯಿತಿ ಎಂಜಿನಿಯರಿಂಗ್‌ ಕಚೇರಿ ಆವರಣದಲ್ಲಿದ್ದ ಮರಗಳನ್ನು ನಿಯಮ ಮೀರಿ ಕಡಿದು ಹಾಕಲಾಗಿದೆ ಎಂದು ಆರೋಪಿಸಿ ವಿವಿಧ ಜನಪರ ಸಂಘಟನೆಗಳ ಕಾರ್ಯಕರ್ತರು ಸೋಮವಾರ ಪ್ರತಿಭಟಿಸಿದರು.

ಮರಗಳನ್ನು ಕಡಿದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಅವರು ಘೋಷಣೆಗಳನ್ನು ಕೂಗಿದರು. ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ವಿ.ಸಿ.ಉಮಾಶಂಕರ್ ಅವರು, ಅರಣ್ಯ ಇಲಾಖೆ ಅನುಮತಿ ಇಲ್ಲದೆ, ಭಾನುವಾರದ ರಜಾದಿನ ಬೇವಿನ ಮರ, ಹೊಂಗೆ ಮರ ಹಾಗೂ ಇತರೆ ಮರಗಳನ್ನು ಕಡಿಯಲಾಗಿದೆ ಎಂದರು.

ಕಡಿದಿರುವ ಮರಗಳನ್ನು ಅರಣ್ಯ ಇಲಾಖೆಯು ತನ್ನ ವಶಕ್ಕೆ ಪಡೆಯಬೇಕು. ನಿಯಮಾನುಸಾರ ಬಹಿರಂಗ ಹರಾಜು ಮಾಡಬೇಕು. ಇಲ್ಲದಿದ್ದಲ್ಲಿ ಹೋರಾಟ ಅನಿವಾರ್ಯ ಎಂದು ಎಚ್ಚರಿಕೆ ನೀಡಿದರು.

ADVERTISEMENT

ತೆಂಗು ಬೆಳೆಗಾರರ ರಾಜ್ಯ ಘಟಕದ ಅಧ್ಯಕ್ಷ ಲಕ್ಷ್ಮಣ ಚನ್ನಸಂದ್ರ, ವೇದಿಕೆಯ ತಾಲ್ಲೂಕು ಅಧ್ಯಕ್ಷ ತಿಪ್ಪೂರು ರಾಜೇಶ್, ಮಹಿಳಾ ಅಧ್ಯಕ್ಷೆ ಪ್ರಿಯಾಂಕ ಅಪ್ಪುಗೌಡ, ತಮ್ಮಣ್ಣ ನಾಯಕ್‌, ನಿವೃತ್ತ ಯೋಧ ಕುಮಾರ್ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.