ADVERTISEMENT

64 ಪದಕಗಳ ಮೆರುಗು

ಹಾರೋಹಳ್ಳಿ ಪ್ರಕಾಶ್‌
Published 20 ಜುಲೈ 2017, 9:27 IST
Last Updated 20 ಜುಲೈ 2017, 9:27 IST
64 ಪದಕಗಳ ಮೆರುಗು
64 ಪದಕಗಳ ಮೆರುಗು   

ಪಾಂಡವಪುರ: ರಾಜ್ಯ, ರಾಷ್ಟ್ರ ಹಾಗೂ ಅಂತರರಾಷ್ಟ್ರೀಯ ಮಟ್ಟದ ಮಾಸ್ಟರ್ಸ್‌ ಅಥ್ಲೆಟಿಕ್ಸ್‌ (ಹಿರಿಯರ)ನಲ್ಲಿ ಭಾಗವಹಿಸಿ 64 ಪದಕಗಳನ್ನು ಪಡೆದಿದ್ದಾರೆ 72 ವಯಸ್ಸಿನ ಸಿ.ಬಿ.ಚಲುವೇಗೌಡ.

ಗುಂಡು ಎಸೆತ, ಚಕ್ರ ಎಸೆತ, ಹ್ಯಾಮಾರ್‌ ಥ್ರೋ ಹಾಗೂ ಈಜು ಸ್ಪರ್ಧೆಗಳಲ್ಲಿ ಭಾಗವಹಿಸಿರುವ ಅವರ ಕ್ರೀಡಾ ಸಾಧನೆ ಎಲ್ಲರಿಗೂ ಮಾದರಿ.

ತಾಲ್ಲೂಕಿನ ಚಿನಕುರಳಿ ಗ್ರಾಮದ ಬೆಟ್ಟೇಗೌಡ ಮತ್ತು ಕೆಂಪಮ್ಮ ಅವರ ದಂಪತಿಯ ಪುತ್ರರಾದ ಅವರು ವಿದ್ಯಾರ್ಥಿ ದೆಸೆಯಿಂದಲೂ ಕ್ರೀಡಾಸಕ್ತಿ ಉಳ್ಳವರು.

ADVERTISEMENT

ವಾಲಿಬಾಲ್‌ ಮತ್ತು ಆಟೋಟಗಳಲ್ಲಿ ಭಾಗವಹಿಸಿ ಬಹುಮಾನ ಗಿಟ್ಟಿಸುತ್ತ ಹೋದರು. ಕಂದಾಯ ಇಲಾಖೆಯಲ್ಲಿ ಗ್ರಾಮ ಲೆಕ್ಕಿಗರಾಗಿ ಸೇವೆ ಸಲ್ಲಿಸಿದ ಇವರು ಕ್ರೀಡೆಯನ್ನು ಮಾತ್ರ ಬಿಡಲಿಲ್ಲ. 2004ರಲ್ಲಿ ನಿವೃತ್ತಿಯಾದ ಚಲುವೇಗೌಡರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಹಲವು ಕ್ರೀಡಾಸ್ಪರ್ಧೆಗಳಲ್ಲಿ ಭಾಗವಹಿಸಿ ಪದಕಗಳ ಸರಮಾಲೆಯನ್ನೇ ಗಳಿಸಿದ್ದಾರೆ.   

2013ರಲ್ಲಿ ಬೆಂಗಳೂರಿನಲ್ಲಿ ನಡೆದ ರಾಷ್ಟ್ರೀಯ ಕ್ರೀಡಾಕೂಟದ ಗುಂಡು ಎಸೆತ ಸ್ಪರ್ಧೆಯಲ್ಲಿ ಚಿನ್ನದ ಪದಕ, ಹ್ಯಾಮರ್ ಥ್ರೋ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದರು. 2014ರಲ್ಲಿ ಕೊಯಮತ್ತೂರಿನಲ್ಲಿ ನಡೆದ ರಾಷ್ಟ್ರೀಯ ಕ್ರೀಡಾಕೂಟದ ಗುಂಡು ಎಸೆತ ಸ್ಪರ್ಧೆಯಲ್ಲಿ ಚಿನ್ನದ ಪದಕ, ಹ್ಯಾಮರ್ ಥ್ರೋ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಪಡೆದರು.

2015ರಲ್ಲಿ ಗೋವಾದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾಕೂಟದ ಗುಂಡು ಎಸೆತದಲ್ಲಿ ಬೆಳ್ಳಿ ಪದಕ, ಹ್ಯಾಮರ್‌ ಥ್ರೋನಲ್ಲಿ ಚಿನ್ನದ ಪದಕ ಪಡೆದಿದ್ದಾರೆ. 2016ರಲ್ಲಿ ಮೈಸೂರಿನಲ್ಲಿ ನಡೆದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಹ್ಯಾಮರ್ ಥ್ರೋನಲ್ಲಿ ಬೆಳ್ಳಿ ಪದಕ. 2017ನೇ ಏಪ್ರಿಲ್‌ ತಿಂಗಳಿನಲ್ಲಿ ಹೈದರ್‌ಬಾದ್‌ನಲ್ಲಿ ನಡೆದ ರಾಷ್ಟ್ರೀಯ ಕ್ರೀಡಾಕೂಟದ ಗುಂಡು ಎಸೆತ ಸ್ಪರ್ಧೆಯಲ್ಲಿ ಚಿನ್ನದ ಪದಕ ಮತ್ತು ಹ್ಯಾಮರ್ ಥ್ರೋನಲ್ಲಿ ಬೆಳ್ಳಿ ಪದಕ ಪಡೆದರು.

2005ರಲ್ಲಿ ಶ್ರೀಲಂಕಾದಲ್ಲಿ ನಡೆದ ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿ ಗುಂಡು ಎಸೆತ ಸ್ಪರ್ಧೆಯಲ್ಲಿ ಚಿನ್ನದ ಪದಕ ಗಳಿಸಿದರು.

2013ರಂದು ಶ್ರೀಲಂಕಾದಲ್ಲಿ ನಡೆದ ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿ ಗುಂಡು ಎಸೆತ ಸ್ಪರ್ಧೆಯಲ್ಲಿ ಚಿನ್ನದ ಪದಕ, ಚಕ್ರ ಎಸೆತ ಸ್ಪರ್ಧೆಯಲ್ಲಿ ಚಿನ್ನದ ಪದಕ, ಹ್ಯಾಮರ್ ಥ್ರೋನಲ್ಲಿ ಚಿನ್ನದ ಪದಕಗಳನ್ನು ಗಳಿಸಿದರು.

2014ರಲ್ಲಿ ಥೈಲ್ಯಾಂಡ್‌ (ಬ್ಯಾಂಕಾಕ್‌)ನಲ್ಲಿ ನಡೆದ ಅಂತರರಾಷ್ಟ್ರೀಯ ಕ್ರೀಡಾಕೂಟದಲ್ಲಿ ಭಾರತವನ್ನು ಪ್ರತಿನಿಧಿಸಿ ಗುಂಡು ಎಸೆತ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದರು.

2016ರಲ್ಲಿ ಶ್ರೀಲಂಕಾದಲ್ಲಿ ನಡೆದ ಅಂತರರಾಷ್ಟ್ರೀಯ ಕ್ರೀಡಾಕೂಟದ ಗುಂಡು ಎಸೆತ, ಚಕ್ರ ಎಸೆತ, ಹ್ಯಾಮರ್ ಥ್ರೋ ನಲ್ಲಿ ಚಿನ್ನದ ಪದಕ                          ಪಡೆದು ದೇಶದ ಹಿರಿಮೆಯನ್ನು ಹೆಚ್ಚಿಸಿದ್ದಾರೆ.

2017ರ ಸೆಪ್ಟೆಂಬರ್ ತಿಂಗಳಿನಲ್ಲಿ ಚೈನಾದಲ್ಲಿ ನಡೆಯಲಿರುವ ಏಷಿಯನ್‌ ಮಾಸ್ಟರ್ಸ್‌ ಅಥ್ಲೆಟಿಕ್ಸ್‌ನಲ್ಲಿ ಸ್ಪರ್ಧಿಸಲು ಭಾರತವನ್ನು ಪ್ರತಿನಿಧಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.