ADVERTISEMENT

ಉತ್ತಮ ಬದುಕಿಗೆ ಕಾನೂನು ಅರಿವು ಪೂರಕ

ಅಖಿಲ ಕರ್ನಾಟಕ ನಲ್ಲಿ ಕೆಲಸಗಾರರ ರಾಜ್ಯಮಟ್ಟದ ಪ್ರಥಮ ಸಮಾವೇಶದಲ್ಲಿ ಶಾಸಕ ಎಂ.ಕೆ.ಸೋಮಶೇಖರ ಸಲಹೆ

​ಪ್ರಜಾವಾಣಿ ವಾರ್ತೆ
Published 1 ಮೇ 2017, 6:13 IST
Last Updated 1 ಮೇ 2017, 6:13 IST
ಮೈಸೂರಿನ ಕರ್ನಾಟಕ ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಭಾನುವಾರ ನಡೆದ ಅಖಿಲ ಕರ್ನಾಟಕ ನಲ್ಲಿ ಕೆಲಸಗಾರರ ರಾಜ್ಯಮಟ್ಟದ ಪ್ರಥಮ ಸಮಾವೇಶವನ್ನು ಶಾಸಕ ಎಂ.ಕೆ.ಸೋಮಶೇಖರ ಉದ್ಘಾಟಿಸಿದರು .
ಮೈಸೂರಿನ ಕರ್ನಾಟಕ ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಆವರಣದಲ್ಲಿ ಭಾನುವಾರ ನಡೆದ ಅಖಿಲ ಕರ್ನಾಟಕ ನಲ್ಲಿ ಕೆಲಸಗಾರರ ರಾಜ್ಯಮಟ್ಟದ ಪ್ರಥಮ ಸಮಾವೇಶವನ್ನು ಶಾಸಕ ಎಂ.ಕೆ.ಸೋಮಶೇಖರ ಉದ್ಘಾಟಿಸಿದರು .   

ಮೈಸೂರು: ನಲ್ಲಿ ಕಾರ್ಮಿಕರು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಬೇಕಾದರೆ ಕಾರ್ಮಿಕ ಕಾನೂನುಗಳನ್ನು ಪೂರ್ಣ ಪ್ರಮಾಣದಲ್ಲಿ ತಿಳಿದುಕೊಂಡಿರಬೇಕು ಎಂದು ಶಾಸಕ ಎಂ.ಕೆ.ಸೋಮಶೇಖರ ಸಲಹೆ ನೀಡಿದರು.

ಸರ್‌ ಎಂ.ವಿ ನಲ್ಲಿ ಮತ್ತು ಒಳಚರಂಡಿ ಹಾಗೂ ಇತರೆ ಕಟ್ಟಡ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘವು ನಗರದಲ್ಲಿ ಭಾನುವಾರ ಏರ್ಪಡಿಸಿದ್ದ ಕಾರ್ಮಿಕರ ದಿನಾಚರಣೆ ಹಾಗೂ ವಿಶ್ವ ಜಲ ದಿನಾಚರಣೆ ಅಂಗವಾಗಿ ಅಖಿಲ ಕರ್ನಾಟಕ ನಲ್ಲಿ ಕೆಲಸಗಾರರ ರಾಜ್ಯ ಮಟ್ಟದ ಪ್ರಥಮ ಸಮಾವೇಶ ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾರ್ಮಿಕರು ಉತ್ತಮ ಜೀವನವನ್ನು ಹೊಂದಬೇಕು ಎಂಬ ಉದ್ದೇಶದಿಂದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅನೇಕ ಕ್ರಾಂತಿಕಾರಿ ಕಾರ್ಮಿಕ ಪರ ಕಾನೂನುಗಳನ್ನು ರಚಿಸಿವೆ. ಈ ಕಾನೂನುಗಳ ಬಗ್ಗೆ ಕಾರ್ಮಿಕರಿಗೆ ಅರಿವು ಬೇಕು. ಹೀಗಿದ್ದಾಗ ಮಾತ್ರ ಕಾರ್ಮಿಕರು ಧೈರ್ಯವಾಗಿ ತಮ್ಮ ಹಕ್ಕುಗಳನ್ನು ಪಡೆದಕೊಳ್ಳಲು ಸಾಧ್ಯವಾಗುವುದು ಎಂದು ಹೇಳಿದರು.

ಇದಕ್ಕೆ ಮುಖ್ಯವಾಗಿ ಕಾರ್ಮಿಕರು ಉತ್ತಮ ಗುಣಮಟ್ಟದ ಶಿಕ್ಷಣವನ್ನು ಪಡೆಯಬೇಕು. ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಕೊಡಿಸಬೇಕು. ಈ ಮೂಲಕ ಕಾರ್ಮಿಕರು ಸಮಾಜದಲ್ಲಿ ಮುಖ್ಯವಾಹಿನಿಗೆ ಸೇರಿ ಗೌರವಯುತ ಬದುಕನ್ನು ನಡೆಸಲು ಸಾಧ್ಯವಾಗುವುದು ಎಂದು ಅಭಿಪ್ರಾಯಪಟ್ಟರು.

ಅಸಂಘಟಿತ ಕಾರ್ಮಿಕರು ಹೆದರುವ ಅಗತ್ಯವಿಲ್ಲ. ಇವರ ಬದುಕು ಮುಂಚಿ ನಂತೆ ಈಗ ಅತಂತ್ರವಾಗಿಲ್ಲ. ಕಾರ್ಮಿಕ ಪರ ಕಾನೂನುಗಳು ಅಸಂಘ ಟಿತ ಕಾರ್ಮಿಕರನ್ನು ಕಾಪಾಡುತ್ತಿವೆ. ಯಾವುದೇ ಸಂದರ್ಭದಲ್ಲೂ ಕಾರ್ಮಿಕ ಇಲಾಖೆಯನ್ನು ಈ ಕಾರ್ಮಿ ಕರು ಸಂಪರ್ಕಿಸಬಹುದು. ಅವರಿಗೆ ಇಲಾಖೆ ಆಸರೆಯಾಗಿರುತ್ತದೆ ಎಂದು ತಿಳಿಸಿದರು.

ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿ ದ್ದರು. ಸಂಸದ ಪ್ರತಾಪ ಸಿಂಹ, ಶಾಸಕ ಎಚ್‌.ಪಿ.ಮಂಜುನಾಥ್‌, ಸಹಾಯಕ ಕಾರ್ಮಿಕ ಆಯುಕ್ತರಾದ ಮೀನಾ ಪಾಟೀಲ ಅತಿಥಿಗಳಾಗಿ ಭಾಗವಹಿಸಿ ದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.