ADVERTISEMENT

ಕಾಮಗಾರಿ ಸ್ಥಗಿತ: ಜನರಿಗೆ ತೊಂದರೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2017, 5:19 IST
Last Updated 19 ಡಿಸೆಂಬರ್ 2017, 5:19 IST

ಹುಣಸೂರು: ರಸ್ತೆ ಅತಿಕ್ರಮಣ ದಿಂದಾಗಿ ತಾಲ್ಲೂಕಿನ ಎಮ್ಮೆಕೊಪ್ಪಲು ಗ್ರಾಮದಲ್ಲಿ ಜನತಾ ವಸತಿ ಯೋಜನೆಯಲ್ಲಿ ನಿರ್ಮಿಸಿರುವ ಕಾಲೊನಿಯಲ್ಲಿ ಚರಂಡಿ ಕಾಮಗಾರಿ ಅರ್ಧಕ್ಕೆ ನಿಂತಿದ್ದು ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ.

ಚರಂಡಿ ಕಾಮಗಾರಿ ಆರಂಭಿಸಿ ಎರಡು ತಿಂಗಳು ಕಳೆದಿದ್ದು, ಗ್ರಾಮದ ನಿವಾಸಿ ಲೋಕೇಶ್ ಎಂಬುವವರು ರಸ್ತೆಯನ್ನೇ ಅತಿಕ್ರಮಿಸಿಕೊಂಡಿದ್ದೇ ಕಾಮಗಾರಿಗೆ ಅಡಚಣೆಯಾಗಿದೆ. ಈ ಸಂಬಂಧ ಪಂಚಾಯಿತಿ ಅಧಿಕಾರಿ ಒತ್ತುವರಿ ತೆರವುಗೊಳಿಸಲು ಹಿಂದೇಟು ಹಾಕುತ್ತಿದ್ದು ಕಾಮಗಾರಿ ಸ್ಥಗಿತಗೊಂಡಿದೆ ಎಂದು ಗ್ರಾಮದ ವಾಸುದೇವ್ ಆರೋಪಿಸಿದ್ದಾರೆ.

ಕಾಮಗಾರಿ ವಿಳಂಬ ಹಾಗೂ ಒತ್ತುವರಿ ಕುರಿತಂತೆ ಮೈಸೂರು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಸೇರಿ ದಂತೆ ತಾಲ್ಲೂಕು ಪಂಚಾಯಿತಿಗೆ ದೂರು ನೀಡಿದ್ದರೂ ಈವರೆಗೂ ಯಾವುದೇ ಕ್ರಮ ತೆಗೆದುಕೊಳ್ಳದ್ದರಿಂದ ನಾಗರಿಕರು ರಸ್ತೆಯಲ್ಲಿ ಓಡಾಡಲು ಆಗದಂತಾಗಿದೆ. ಇದಲ್ಲದೆ ಚರಂಡಿ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡಿ ರುವುದರಿಂದ ತ್ಯಾಜ್ಯ ನೀರು ಹೊರ ಹೋಗಲು ಆಗುತ್ತಿಲ್ಲ ಎಂದು ಅವರು ದೂರಿದ್ದಾರೆ.

ADVERTISEMENT

ನಿವೇಶನದ ಅಳತೆ ಕುರಿತು ದಾಖಲೆ ನೀಡುವಂತೆ ಲೋಕೇಶ್ ಅವರು ಮಾಹಿತಿ ಹಕ್ಕು ಕಾಯ್ದೆ ಯಲ್ಲಿ ಗ್ರಾಮ ಪಂಚಾಯಿತಿಗೆ ಅರ್ಜಿ ಸಲ್ಲಿಸಿದ್ದರೂ ಅಧಿಕಾರಿಗಳು ಮಾಹಿತಿ ನೀಡಲು ದಿನ ದೂಡು ತ್ತಿದ್ದಾರೆ. ಈ ಸಮಸ್ಯೆಗಳಿಗೆ ತಾಲ್ಲೂಕು ಅಧಿಕಾರಿಗಳು ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂಬುದು ಗ್ರಾಮಸ್ಥರ ದೂರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.