ADVERTISEMENT

ಕಾಲ್ನಡಿಗೆ ಮೂಲಕ ಜಾಗೃತಿ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2017, 9:59 IST
Last Updated 15 ನವೆಂಬರ್ 2017, 9:59 IST

ಮೈಸೂರು: ವಿಶ್ವ ಮಧುಮೇಹ ದಿನಾಚರಣೆಯ ಪ್ರಯುಕ್ತ ಇಲ್ಲಿನ ಸರ್ಕಾರಿ ಆಯುರ್ವೇದ ಸಂಶೋಧನಾ ಕೇಂದ್ರ, ವಿಜಯ ವಿಠಲ ವಿದ್ಯಾಸಂಸ್ಥೆ ಹಾಗೂ ಶಾಂತಿಗಿರಿ ಆಯುರ್ವೇದ ಸಿದ್ಧ ಆಸ್ಪತ್ರೆ ಆಶ್ರಯದಲ್ಲಿ ಜಾಗೃತಿಗಾಗಿ ಕಾಲ್ನಡಿಗೆ ಜಾಥಾ ನಡೆಯಿತು. ವಿವಿಧ ಶಾಲೆಗಳ ವಿದ್ಯಾರ್ಥಿಗಳು, ಸಿಬ್ಬಂದಿ ಮತ್ತು ಸಾರ್ವಜನಿಕರೂ ಪಾಲ್ಗೊಂಡರು.

ವಿ-ಲೀಡ್ ಸಂಸ್ಥೆಯ ಸಂಸ್ಥಾಪಕ ಡಾ.ಎಂ.ಎ.ಬಾಲಸುಬ್ರಮಣ್ಯ ಜಾಥಾ ಉದ್ಘಾಟಿಸಿದರು. ವೈದ್ಯರಾದ ಡಾ.ಚಂದ್ರಶೇಖರ್, ಸರ್ಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಾಯಕ ನಿರ್ದೇಶಕ ಡಾ.ಲಕ್ಷ್ಮಿನಾರಾಯಣ ಶೆಣೈ, ವಿಜಯ ವಿಠಲ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸತ್ಯಪ್ರಸಾದ್ ಸೇರಿದಂತೆ ಇನ್ನಿತರ ಗಣ್ಯರು ಇದ್ದರು.

ವಿಜಯ ವಿಠಲ ಶಾಲೆ ಆವರಣದಿಂದ ಆರಂಭವಾದ ಜಾಥಾ, ಕಾಮಾಕ್ಷಿ ಆಸ್ಪತ್ರೆ, ಜೋಡಿರಸ್ತೆ, ವಿಜಯ ಬ್ಯಾಂಕ್ ವೃತ್ತ ಮಾರ್ಗವಾಗಿ ಮತ್ತದೇ ಶಾಲೆಗೆ ಬಂದು ಮುಕ್ತಾಯಗೊಂಡಿತು. ಮಧುಮೇಹಮುಕ್ತ ಭಾರತಕ್ಕಾಗಿ ವಿದ್ಯಾರ್ಥಿಗಳು ವಿಜಯ ಬ್ಯಾಂಕ್ ವೃತ್ತದ ಬಳಿ ಮಾನವ ಸರಪಳಿ ನಿರ್ಮಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.