ADVERTISEMENT

ನ್ಯಾ. ಸದಾಶಿವ ಆಯೋಗದ ವರದಿ ಅಂಗೀಕರಿಸಲು ಮನವಿ

​ಪ್ರಜಾವಾಣಿ ವಾರ್ತೆ
Published 20 ನವೆಂಬರ್ 2017, 5:36 IST
Last Updated 20 ನವೆಂಬರ್ 2017, 5:36 IST

ಮೈಸೂರು: ಪರಿಶಿಷ್ಟ ಜಾತಿಯ ಒಳಮೀಸಲಾತಿ ವರ್ಗೀಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗ ನೀಡಿರುವ ವರದಿ ಜಾರಿಗೆ ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಎನ್.ಮೂರ್ತಿ ಬಣದ ಜಿಲ್ಲಾಧ್ಯಕ್ಷ ಬೆಳ್ತೂರು ಮಹದೇವ ತಿಳಿಸಿದರು.

ಸದಾಶಿವ ಆಯೋಗ ವರದಿ ಸಲ್ಲಿಸಿ 6 ವರ್ಷ ಕಳೆದಿದೆ. ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ರಾಜಕೀಯ ಒತ್ತಡಕ್ಕೆ ಮಣಿದು ವರದಿಯನ್ನು ನಿರ್ಲಕ್ಷಿಸುತ್ತಿದೆ. ಕಾಂಗ್ರೆಸ್ ಸರ್ಕಾರಕ್ಕೆ ನೈತಿಕತೆ ಇದ್ದರೆ ವರದಿ ಜಾರಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು.

ಬೆಳಗಾವಿ ಅಧಿವೇಶನದಲ್ಲಿ ವರದಿಯನ್ನು ಅಂಗೀಕರಿಸಬೇಕು ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ದಲಿತ ಮುಖಂಡರಾದ ಎನ್.ಮಂಜುನಾಥ್, ಭೋಜ, ಜೆ.ಮಹದೇವ ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.