ADVERTISEMENT

ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ; ತ್ವರಿತ ಕ್ರಮಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 9 ಮಾರ್ಚ್ 2017, 8:57 IST
Last Updated 9 ಮಾರ್ಚ್ 2017, 8:57 IST
ಮೈಸೂರು: ಮಹಿಳೆಯರಿಗೆ ಶೇ 33ರಷ್ಟು ಮೀಸಲಾತಿ ನೀಡುವ ಸಂಬಂಧ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ಎಚ್.ವಿಶ್ವನಾಥ್ ಆಗ್ರಹಿಸಿದರು.
ನಗರ ಮಹಿಳಾ ಕಾಂಗ್ರೆಸ್ ಘಟಕದ ವತಿಯಿಂದ ಪುರಭವನದಲ್ಲಿ ಬುಧವಾರ ಏರ್ಪಡಿಸಿದ್ದ ಮಹಿಳಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.
 
ರಾಜೀವ್‌ಗಾಂಧಿ ಅವರ ಕಾಲದಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡುವ ಚರ್ಚೆ ಆರಂಭವಾಯಿತು. ಆದರೆ, ಇಲ್ಲಿವರೆಗೂ ಒಂದು ಸ್ಪಷ್ಟ ತೀರ್ಮಾನಕ್ಕೆ ಬರಲಾಗಿಲ್ಲ. 
ಇನ್ನಾದರೂ ಈ ಕುರಿತು ಗಂಭೀರ ಚರ್ಚೆ ನಡೆಯಬೇಕಿದೆ ಎಂದು ಅಭಿಪ್ರಾಯಪಟ್ಟರು.
 
ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದಾಗ ಹೆಣ್ಣು ಮಕ್ಕಳಿಗೆ ಪಿಯುವರೆಗೆ ಉಚಿತ ಶಿಕ್ಷಣ, ಸ್ತ್ರೀಶಕ್ತಿ ಸಂಘಗಳ ಸ್ಥಾಪನೆ ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಜಾರಿಗೆ ತಂದರು ಎಂದು ಶ್ಲಾಘಿಸಿದರು.
 
ಮುಖಂಡರಾದ ಡಾ.ಕಮಲಾ ರಾಮನ್, ರತ್ನಾ ಅರಸ್, ಕೇಶವಮೂರ್ತಿ, ಪ್ರೊ.ವಸಂತ, ಡಾ.ಪುಷ್ಪಾಲತಾ ಅಮರನಾಥ್, ಡಾ.ನಾಗಲಕ್ಷ್ಮಿ, ವಿಜಯಕುಮಾರಿ ಅವರನ್ನು ಸನ್ಮಾನಿಸಲಾಯಿತು. 
 
ಪಕ್ಷದ ನಗರ ಘಟಕದ ಅಧ್ಯಕ್ಷ ಟಿ.ಎಸ್.ರವಿಶಂಕರ್, ಎಚ್.ಎ. ವೆಂಕಟೇಶ್, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷೆ ಮಲ್ಲಿಗೆ ವೀರೇಶ್, ಮುಖಂಡರಾದ ಶಾಂತಕುಮಾರಿ, ರಾಧಾಮಣಿ ಹಾಜರಿದ್ದರು.
 
ಸನ್ಮಾನ
ಮೈಸೂರು: ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಮಹಿಳಾ ಘಟಕದ ವತಿಯಿಂದ ಬುಧವಾರ ನಡೆದ ಮಹಿಳಾ ದಿನಾಚರಣೆಯಲ್ಲಿ ಕೂಲಿ ಕಾರ್ಮಿಕ ಮಹಿಳೆಯರನ್ನು ಸನ್ಮಾನಿಸಲಾಯಿತು. 
 
ಚಾಮುಂಡೇಶ್ವರಿ ಕ್ಷೇತ್ರ ಘಟಕದ ಅಧ್ಯಕ್ಷ ಅರುಣ್‌ಕುಮಾರ್ ಗೌಡ, ಜಿಲ್ಲಾ ಘಟಕದ ಉಪಾಧ್ಯಕ್ಷ ಅಶೋಕ್‌, ಪ್ರಕೋಷ್ಠ ಸಂಚಾಲಕ ಶ್ರೀನಿವಾಸ್‌, ಪ್ರಧಾನ ಕಾರ್ಯದರ್ಶಿ ಗೋಪಾಲ್‌, ಮಹಿಳಾ ಘಟಕದ ಅಧ್ಯಕ್ಷತೆ ನೇಹಾ ನೈನಾ, ಉಪಾಧ್ಯಕ್ಷರಾದ ಅನಿತಾ, ಪ್ರಮೀಳಾ ನಾಯಕ್‌, ತ್ರಿವೇಣಿ, ಕಾರ್ಯದರ್ಶಿಗಳಾದ ನಾಗಮ್ಮ, ಮಧು, ಗೀತಾ, ಶಂಕರಿ, ಪಲ್ಲವಿ, ಗಾಯತ್ರಿ, ಕೋಶಾಧ್ಯಕ್ಷರಾದ ಮೇಘರಾಜ್‌, ಶಿವಣ್ಣ ಇದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.