ADVERTISEMENT

‘ವಿದ್ಯುತ್‌’ ಉತ್ಸವಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2017, 6:10 IST
Last Updated 16 ಏಪ್ರಿಲ್ 2017, 6:10 IST

ಮೈಸೂರು: ನಗರದ ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜಿನಲ್ಲಿ ಹಮ್ಮಿಕೊಂಡಿರುವ ‘ವಿದ್ಯುತ್‌– 2017’ ತಾಂತ್ರಿಕ ಹಬ್ಬಕ್ಕೆ ಶನಿವಾರ ಚಾಲನೆ ದೊರಕಿತು.
ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ಕುಲಪತಿ ಪ್ರೊ.ಸರ್ವಮಂಗಳಾ  ಶಂಕರ್ ಉದ್ಘಾಟಿಸಿ ಮಾತನಾಡಿ, ಎಂಜಿನಿ ಯರಿಂಗ್ ಕಾಲೇಜುಗಳಲ್ಲಿ ಸಾಂಸ್ಕೃತಿಕ ವಾತಾವರಣ ಇರಲೇಬೇಕು. ಇದರಿಂದ ವಿದ್ಯಾರ್ಥಿಗಳು ಸಾಮಾಜಿಕವಾಗಿ ಬೆರೆತು, ಜವಾಬ್ದಾರಿಯುತರಾಗಿ ಬೆಳೆಯಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ಈಚಿನ ದಿನಗಳಲ್ಲಿ ಶಿಕ್ಷಣ ಸಂಸ್ಥೆಗಳ ಸಂಖ್ಯೆ ಹೆಚ್ಚಾಗಿದೆ. ಆದರೆ, ಗುಣಮಟ್ಟ ಕ್ಷೀಣಿಸುತ್ತಿದೆ. ಶಿಕ್ಷಣ ಸಂಸ್ಥೆಗಳು ಶಿಕ್ಷಣದ ಗುಣಮಟ್ಟದ ಬಗ್ಗೆ ಹೆಚ್ಚು ಗಮನ ನೀಡಬೇಕು. ಗುಣಮಟ್ಟವನ್ನೇ ಆದ್ಯತೆಯನ್ನಾಗಿ ಇಟ್ಟುಕೊಂಡು ವಿದ್ಯಾರ್ಥಿಗಳ ಭವಿಷ್ಯವನ್ನು ಗಟ್ಟಿಗೊಳಿಸಬೇಕು ಎಂದು ಅವರು ಕಿವಿಮಾತು ಹೇಳಿದರು.

ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗುಂಡಪ್ಪ ಗೌಡ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳನ್ನು ಬಹುಮುಖಿ ಪ್ರತಿಭೆಯನ್ನು ಹೊಂದುವ ಎಲ್ಲ ಅವಕಾಶಗಳನ್ನು ಕಲ್ಪಿಸಿ ಕೊಡಲಾಗುತ್ತಿದೆ. ಇದನ್ನು ಭವಿಷ್ಯದಲ್ಲಿ ಮತ್ತಷ್ಟು ಉತ್ತಮಗೊಳಿಸಲಾಗುವುದು. ‘ವಿದ್ಯುತ್‌’ ಮಾದರಿಯ ಕಾರ್ಯಕ್ರಮಗಳು ಮತ್ತಷ್ಟು ನಡೆಯಲಿವೆ ಎಂದು ಹೇಳಿದರು.
ಸಂಘದ ಕಾರ್ಯದರ್ಶಿ ಪಿ.ವಿಶ್ವನಾಥ್‌, ಖಜಾಂಚಿ ಎಸ್‌.ಎನ್‌. ಲಕ್ಷ್ಮಿನಾರಾಯಣ, ಕಾಲೇಜಿನ ಪ್ರಾಂಶು ಪಾಲ ಡಿ.ಸದಾಶಿವೇಗೌಡ ಇದ್ದರು.ನಂತರ ಕಾಲೇಜಿನ ಎನ್‌ಎಸ್‌ಎಸ್‌ ಹಾಗೂ ರೆಡ್‌ಕ್ರಾಸ್‌ ಸಂಸ್ಥೆಯ ವತಿಯಿಂದ ರಕ್ತದಾನ ಶಿಬಿರ ನಡೆಯಿತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.