ADVERTISEMENT

₹ 1.15 ಕೋಟಿ ವೆಚ್ಚದ ಕಾಮಗಾರಿ ಪೂರ್ಣ

​ಪ್ರಜಾವಾಣಿ ವಾರ್ತೆ
Published 17 ಮೇ 2017, 5:37 IST
Last Updated 17 ಮೇ 2017, 5:37 IST

ಮೈಸೂರು: ನಂಜನಗೂಡು ತಾಲ್ಲೂಕಿನ ಆಲಂಬೂರು ಗ್ರಾಮದಲ್ಲಿ ₹ 1.15 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾದ ಅಭಿವೃದ್ಧಿ ಕಾಮಗಾರಿಗಳು ಮುಗಿದಿವೆ. ಇದರೊಂದಿಗೆ ವರುಣಾ ಕ್ಷೇತ್ರದ ಅಭಿವೃದ್ಧಿಗೆ ಪ್ರಾಧಾನ್ಯತೆ ನೀಡಲಾ ಗುತ್ತಿದೆ ಎಂದು ವರುಣಾ ಕ್ಷೇತ್ರದ ವಸತಿ ಯೋಜನೆಗಳ ಜಾಗೃತಿ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ವರುಣಾ ಕ್ಷೇತ್ರದ ಆಲಂಬೂರು ಗ್ರಾಮದಲ್ಲಿ ಮಂಗಳವಾರ, ಆಲಂಬೂರು ಮಂಟಿ, ಮಲ್ಲುಪುರ, ಕಿರುಗುಂದ, ಸೋನಹಳ್ಳಿ, ಮಡಹಳ್ಳಿ. ಅಳಗಂಚಿ, ಅಳಗಂಚಿಪುರ ಗ್ರಾಮಗಳಲ್ಲಿ ನಡೆದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ಗ್ರಾಮದ ಸಮುದಾಯ ಭವನಕ್ಕೆ ₹ 15 ಲಕ್ಷ, ಬಸವೇಶ್ವರ ದೇವಸ್ಥಾನಕ್ಕೆ ₹ 1.5 ಲಕ್ಷ, ಗರಡಿಮನೆಗೆ ₹ 8 ಲಕ್ಷ ಅನು ದಾನ ಬಿಡುಗಡೆಯಾಗಿದೆ. ಉಳಿದ ಕಾಮಗಾರಿಗಳನ್ನು ಮಾಡಿಕೊಡಲಾಗುವುದು’ ಎಂದರು.

ADVERTISEMENT

ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿ ಎಂ.ರಾಮಯ್ಯ ಮಾತನಾಡಿದರು. ರಾಜ್ಯ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ.ಬಸವರಾಜು, ರಾಜ್ಯ ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷ ನಂದ ಕುಮಾರ್, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷ ಗೋವಿಂದರಾಜು, ಮಾಲೇ ಗೌಡ, ಕಲ್ಲಳ್ಳಿಬಾಬು, ಮರಳೂರು ಮಹೇಶ, ಧರ್ಮೇಂದ್ರ, ರಂಗಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ, ಇಒ ರೇವಣ್ಣ, ತಹಶೀಲ್ದಾರ್ ದಯಾ ನಂದ್, ಕಲಾವತಿ, ಶ್ರೀನಿವಾಸ್ ಇದ್ದರು.
ನುಡಿದಂತೆ ನಡೆದ ಸರ್ಕಾರ

ನಂಜನಗೂಡು: ರಾಜ್ಯದ ಇತಿಹಾಸದಲ್ಲಿ ಜನರಿಗೆ ಪ್ರಣಾಳಿಕೆಯಲ್ಲಿ ಹೇಳಿದ್ದಂತೆ 165ರಲ್ಲಿ 150 ಭರವಸೆಗಳನ್ನು ಈಡೇರಿಸಿರುವ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ಎಂದು ವರುಣಾ ಕ್ಷೇತ್ರದ ವಸತಿ ಜಾಗೃತಿ ಸಮಿತಿ ಅಧ್ಯಕ್ಷ ಡಾ.ಯತಿಂದ್ರ ತಿಳಿಸಿದರು.

ತಾಲ್ಲೂಕಿನ ಮಲ್ಲಿಪುರ ಗ್ರಾಮದಲ್ಲಿ ಮಂಗಳವಾರ ಜನ ಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು.

ಸರ್ಕಾರ ಕಳೆದ 4 ವರ್ಷಗಳ ಆಡಳಿತದಲ್ಲಿ ಅನೇಕ ಜನಪರ ಯೋಜನೆ ಗಳನ್ನು ಜಾರಿಗೆ ತಂದು ಉತ್ತಮ ಆಡಳಿತ ನಡೆಸಿದ ಸರ್ಕಾರ ಎನಿಸಿ ಕೊಂಡಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ರಾಜ್ಯದ ಎಲ್ಲ ವರ್ಗದ ಜನರಿಗೂ ನ್ಯಾಯ ಸಲ್ಲಿಸಿದ್ದಾರೆ. ಸರ್ಕಾರದಿಂದ ಜಾರಿಯಾದ ಕಾರ್ಯ ಕ್ರಮಗಳು ನೇರವಾಗಿ ಜನರನ್ನು  ತಲು ಪಿವೆ. ವರುಣಾ ಕ್ಷೇತ್ರದಲ್ಲಿ  ವರ್ಷದ ಅವಧಿಯಲ್ಲಿ ಎಲ್ಲ ಕಾಮಗಾರಿಗಳು ಕಾಲ ಮಿತಿಯಲ್ಲಿ ಮುಗಿಯಲಿವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.