ADVERTISEMENT

ಸಿ.ಎಂ ರಾಜೀನಾಮೆಗೆ ಬಿಜೆಪಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 5 ಜನವರಿ 2018, 5:40 IST
Last Updated 5 ಜನವರಿ 2018, 5:40 IST

ಮೈಸೂರು: ಮಂಗಳೂರಿನ ಬಿಜೆಪಿ ಕಾರ್ಯಕರ್ತ ದೀಪಕ್‌ ರಾವ್‌ ಕೊಲೆ ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಗುರುವಾರ ಪ್ರತಿಭಟನೆ ನಡೆಯಿತು.

ನಗರದ ಎಫ್‌ಟಿಎಸ್ ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ನರಸಿಂಹರಾಜ ಕ್ಷೇತ್ರ ಘಟಕದ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ರಾಮಲಿಂಗಾರೆಡ್ಡಿ ಕೂಡಲೇ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಿಂದೂಗಳಿಗೆ ರಕ್ಷಣೆ ಇಲ್ಲವಾಗಿದೆ. ಕರಾವಳಿ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. 2013ರಿಂದ ಈವರೆಗೆ ರಾಜ್ಯದಲ್ಲಿ 20ಕ್ಕೂ ಹೆಚ್ಚು ಸಂಘ ಪರಿವಾರದ ಕಾರ್ಯಕರ್ತರನ್ನು ಹತ್ಯೆ ಮಾಡಲಾಗಿದೆ. ಹಂತಕರಿಗೆ ಕಾಂಗ್ರೆಸ್‌ ರಕ್ಷಣೆ ಒದಗಿಸುತ್ತಿದೆ ಎಂದು ಆರೋಪಿಸಿದರು.

ADVERTISEMENT

ದೀಪಕ್‌ ಅವರನ್ನು ಕೊಲೆ ಮಾಡಿದ ಆರೋಪಿಗಳನ್ನು ಬಂಧಿಸಲು ಪೊಲೀಸರು ಮುಂದಾಗಿದ್ದರು. ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಹಿಂದೂಗಳ ಪರವಾಗಿ ಧ್ವನಿ ಎತ್ತುವವರನ್ನು ಮುಗಿಸುವ ಹುನ್ನಾರ ವ್ಯವಸ್ಥಿತವಾಗಿ ನಡೆಯುತ್ತಿದೆ.

ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು. ಬಿಜೆಪಿ ಮುಖಂಡರಾದ ನಟರಾಜ್‌, ಹೇಮಂತಕುಮಾರಗೌಡ ಸೇರಿ ಅನೇಕರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.