ADVERTISEMENT

ಅದ್ದೂರಿಯಾಗಿ ನಡೆದ ಅಡ್ಡಪಲ್ಲಕ್ಕಿ ಮಹೋತ್ಸವ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2018, 9:38 IST
Last Updated 16 ಮಾರ್ಚ್ 2018, 9:38 IST
ಬಲ್ಲಟಗಿಯಲ್ಲಿ ಬುಧವಾರ ಬಾಳೆ ಹೊನ್ನೂರಿನ ರಂಭಾಪುರಿ ಮಠದ ಡಾ.ವೀರಸೋಮೇಶ್ವರ ಶಿವಾಚಾರ್ಯರ ಅಡ್ಡ ಪಲ್ಲಕ್ಕಿ ಮಹೋತ್ಸವ ನಡೆಯಿತು
ಬಲ್ಲಟಗಿಯಲ್ಲಿ ಬುಧವಾರ ಬಾಳೆ ಹೊನ್ನೂರಿನ ರಂಭಾಪುರಿ ಮಠದ ಡಾ.ವೀರಸೋಮೇಶ್ವರ ಶಿವಾಚಾರ್ಯರ ಅಡ್ಡ ಪಲ್ಲಕ್ಕಿ ಮಹೋತ್ಸವ ನಡೆಯಿತು   

ಸಿರವಾರ: ಸಮೀಪದ ಬಲ್ಲಟಗಿ ಗ್ರಾಮದಲ್ಲಿ ಬಾಳೆ ಹೊನ್ನೂರಿನ ರಂಭಾಪುರಿ ಮಠದ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ಶಿವಾಚಾರ್ಯ ಭಗವತ್ಪಾದರ ಅಡ್ಡ ಪಲ್ಲಕ್ಕಿ ಮಹೋತ್ಸವ ಬುಧವಾರ ಸಂಜೆ ಅದ್ಧೂರಿಯಾಗಿ ನಡೆಯಿತು.

ಬಲ್ಲಟಗಿಯ ಲಿಂಗೈಕ್ಯ ಬಸವಲಿಂಗಯ್ಯ ತಾತನವರ ಆರಾಧನೆ ಮತ್ತು ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಅಡ್ಡ ಪಲ್ಲಕ್ಕಿ ಮಹೋತ್ಸವು ಸುಮಂಗಲಿಯರ ಪೂರ್ಣ ಕುಂಭ, ಕಳಸದೊಂದಿಗೆ ನಂದಿಕೋಲು ಕುಣಿತ, ವಿವಿಧ ವಾದ್ಯ ಮೇಳದವರೊಂದಿಗೆ ವಿಜೃಂಭಣೆಯಿಂದ ನಡೆಯಿತು.

ಗ್ರಾಮದಲ್ಲಿ ಲಿಂಗೈಕ್ಯ ಬಸವಲಿಂಗ ತಾತನವರ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಿತು.

ADVERTISEMENT

ಸಂಜೆ ನಡೆದ ಧರ್ಮಸಭೆಯಲ್ಲಿ ರಂಭಾಪುರಿ ಮಠದ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ಶಿವಾಚಾರ್ಯರು ಧರ್ಮೋಪದೇಶ ನೀಡಿದರು.

ಧರ್ಮ ಸಭೆಯ ನೇತೃತ್ವವನ್ನು ನೀಲಗಲ್ಲು ಬೃಹನ್ಮಠದ ಡಾ.ಪಂಚಾಕ್ಷರಿ ಶಿವಾಚಾರ್ಯ ಸ್ವಾಮೀಜಿ, ನವಲಕಲ್ಲು ಬೃಹನ್ಮಠದ ಅಭಿನವ ಸೋಮನಾಥ ಶಿವಾಚಾರ್ಯ ಸ್ವಾಮೀಜಿ ವಹಿಸಿದ್ದರು.

ರಾಯಚೂರು ಕಿಲ್ಲೆ ಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ, ಸಿಂಧನೂರು ರಂಭಾಪುರಿ ಶಾಖಾಮಠದ ಸೋಮನಾಥ ಶಿವಾಚಾರ್ಯ ಸ್ವಾಮೀಜಿ, ವಿವಿಧ ಮಠಾಧೀಶರು ಮತ್ತು ಮುಖಂಡರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.