ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ: ನಿಷೇಧಾಜ್ಞೆ ಜಾರಿ

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2017, 9:07 IST
Last Updated 24 ಮಾರ್ಚ್ 2017, 9:07 IST

ಲಿಂಗಸುಗೂರು: ಎಸ್ಸೆಸ್ಸೆಲ್ಸಿ ಪರೀಕ್ಷೆ ಮಾರ್ಚ್‌ 30ರಿಂದ ಏಪ್ರಿಲ್‌ 12ರವರೆಗೆ ನಡೆಯಲಿದ್ದು, ತಾಲ್ಲೂಕಿನ ಕ್ಲಸ್ಟರ್‌ ವ್ಯಾಪ್ತಿಯಲ್ಲಿ 13 ಪರೀಕ್ಷಾ ಕೇಂದ್ರ ಗುರುತಿಸಿದೆ. ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ ಎಂದು ತಹಶೀಲ್ದಾರ್‌ ಶಿವಾನಂದ ಸಾಗರ್‌ ತಿಳಿಸಿದರು.

ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಪರೀಕ್ಷಾ ಕೇಂದ್ರದ ಸುತ್ತ ಝೆರಾಕ್ಸ್‌ ಅಂಗಡಿಗಳನ್ನು ಬಂದ್‌ ಮಾಡಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಆಸನಗಳ ವ್ಯವಸ್ಥೆ ಮಾಡಬೇಕು. ಶೌಚಾಲಯ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಕೇಂದ್ರ ಮುಖ್ಯ ಅಧೀಕ್ಷಕರ ಹೊರತುಪಡಿಸಿ ಯಾರೊಬ್ಬರಿಗೂ ಮೊಬೈಲ್‌ ಬಳಕೆಗೆ ಅವಕಾಶ ನೀಡಿಲ್ಲ. ವಿದ್ಯಾರ್ಥಿಗಳು ಎಲೆಕ್ಟ್ರಾನಿಕ್‌ ವಸ್ತುಗಳನ್ನು ಒಳಗೆ ತರುವ ಹಾಗಿಲ್ಲ ಎಂದರು.

ಶಿಕ್ಷಣ ಸಂಯೋಜಕ ನೀಲಪ್ಪ ಹೊಸಮನಿ ಮಾಹಿತಿ ನೀಡಿ, ತಾಲ್ಲೂಕಿನಲ್ಲಿ 5431 ಮಕ್ಕಳು ನೋಂದಣಿ ಮಾಡಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರು, ಸಹಾಯಕ ಅಧೀಕ್ಷಕರು, ಸ್ಥಿರ ಜಾಗೃತ ದಳ ಸಿಬ್ಬಂದಿ ನಿಯೋಜನೆ ಮಾಡಿದೆ. ಅಲ್ಲದೆ ಐದು ಜನ ಮಾರ್ಗಾಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ವಿವರಿಸಿದರು. ಡಿವೈಎಸ್ಪಿ ಎಸ್‌.ಎಚ್‌. ಸುಬೇದಾರ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.