ADVERTISEMENT

‘ನೇಮಕಾತಿ ಪರೀಕ್ಷೆ: ಹೆಮ್ಮೆ ಉಳಿಸಿ’

​ಪ್ರಜಾವಾಣಿ ವಾರ್ತೆ
Published 15 ಜುಲೈ 2017, 7:01 IST
Last Updated 15 ಜುಲೈ 2017, 7:01 IST

ರಾಯಚೂರು: ‘ರಾಜ್ಯದ ಪೊಲೀಸ್‌ ನೇಮಕಾತಿ ಪ್ರಕ್ರಿಯೆ ದೇಶಕ್ಕೆ ಮಾದರಿಯಾಗಿದ್ದು, ವಿವಿಧ ರಾಜ್ಯಗಳು ಕೂಡ ರಾಜ್ಯದ ವಿಧಾನವನ್ನು ಅಳವಡಿಸಿಕೊಂಡಿವೆ. ಈ ಹೆಮ್ಮೆಯನ್ನು ಕಾಪಾಡಿಕೊಂಡು ಹೋಗುವ ನಿಟ್ಟಿನಲ್ಲಿ ಹೈದರಾಬಾದ್‌ ಕರ್ನಾಟಕ ಪ್ರದೇಶದ ಪೊಲೀಸ್‌ ಕಾನ್‌ಸ್ಟೆಬಲ್‌ ಪರೀಕ್ಷೆಯನ್ನು ನಡೆಸಬೇಕು’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಿಶಾ ಜೇಮ್ಸ್‌ ಹೇಳಿದರು.

ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ಹೈದರಾಬಾದ್ ಕರ್ನಾಟಕ ಪ್ರದೇಶದ ಪೊಲೀಸ್‌ ಕಾನ್‌ಸ್ಟೆಬಲ್‌ ನೇಮಕಾತಿಗೆ ಜು.16ರಂದು ನಡೆಯಲಿರುವ ಲಿಖಿತ ಪರೀಕ್ಷೆಯ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದರು.

‘ಪರೀಕ್ಷೆಗೆ 10 ಸಾವಿರ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ಇದುವರೆಗೆ 5ಸಾವಿರ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ಪ್ರಥಮಬಾರಿಗೆ 10ಸಾವಿರ ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿರುವ ಪರೀಕ್ಷೆ ನಡೆಸಲಾಗುತ್ತಿದ್ದು, ಅತ್ಯಂತ ಅಚ್ಚುಕಟ್ಟಾಗಿ ಪರೀಕ್ಷೆ ನಡೆಸಬೇಕು’ ಎಂದರು.

ADVERTISEMENT

‘ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ಹಾಗೂ ಅಭ್ಯರ್ಥಿಗಳನ್ನು ಹೊರತುಪಡಿಸಿ ಅನ್ಯರಿಗೆ ಪ್ರವೇಶ ನೀಡಬಾರದು. ಇಲಾಖೆಯ ರೂಪಿಸಿರುವ ನಿಯಮಗಳಂತೆ ಪರೀಕ್ಷೆಯನ್ನು ನಡೆಸಲು ಸಿದ್ಧತೆಗಳು ಮಾಡಿಕೊಳ್ಳಬೇಕು’ ಎಂದರು.

‘ಮುಖ್ಯಮಂತ್ರಿ ಕಾರ್ಯಕ್ರಮದ ಹಿನ್ನೆಲೆ ಸೂಕ್ತ ಭದ್ರತೆ ಕಲ್ಪಿಸುವ ಹೊಣೆ ನೀಡಿದ್ದರಿಂದ ಪರೀಕ್ಷೆಗೆ ಸಿದ್ಧತೆ ಕೈಗೊಳ್ಳಲು ಕಾಲಾವಕಾಶ ಕಡಿಮೆಯಿತ್ತು. ಆದರೂ, ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು. ವಿವಿಧ ಪೊಲೀಸ್‌ ಅಧಿಕಾರಿಗಳು ಹಾಗೂ ಪರೀಕ್ಷಾ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.