ADVERTISEMENT

‘ಪ್ರವರ್ಗ 2ಎ ಮೀಸಲಾತಿ ಕಲ್ಪಿಸಿ’

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2017, 6:44 IST
Last Updated 4 ಸೆಪ್ಟೆಂಬರ್ 2017, 6:44 IST

ರಾಯಚೂರು: ’ವೀರಶೈವ ಲಿಂಗಾಯತರನ್ನು ಸೇರಿಸಿ ಪ್ರತ್ಯೇಕ ಧರ್ಮ ಸ್ಥಾಪಿಸಲು ಮುಖ್ಯಮಂತ್ರಿಗೆ ಆಸೆಯಿದ್ದರೆ, ಮೊದಲು ಅವರು ಪ್ರವರ್ಗ 2ಎ ಮೀಸಲಾತಿ ಕಲ್ಪಿಸಲಿ’ ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಆಗ್ರಹಿಸಿದರು.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಪ್ರತ್ಯೇಕ ಧರ್ಮ ಸ್ಥಾಪನೆ ಮಾಡಲು ಸಂವಿಧಾನದಲ್ಲಿ ಅವಕಾಶವಿಲ್ಲ ಎಂಬ ಮಾಹಿತಿ ಪಡೆದುಕೊಳ್ಳಲಾಗಿದೆ. ರಾಜ್ಯ ಸರ್ಕಾರ ಪ್ರತ್ಯೇಕ ಧರ್ಮ ಸ್ಥಾಪನೆಗೆ ಶಿಫಾರಸು ಮಾಡಿದರೂ ಯಾವುದೇ ಪ್ರಯೋಜನ ಆಗುವುದಿಲ್ಲ. ಪ್ರತ್ಯೇಕ ಧರ್ಮದ ಬದಲಿಗೆ ಸಮಾಜಕ್ಕೆ ಮೀಸಲಾತಿ ಕಲ್ಪಿಸಲಿ’ ಎಂದರು.

‘ಸಮಾಜ ಒಡೆಯುವ ಕೆಲಸ ಮಾಡುತ್ತಿರುವ ಕೆಲವರಿಂದ ಗೊಂದಲ ಉಂಟಾಗಿದ್ದು, ಅದನ್ನು ಸರಿಪಡಿಸಲು ಬಾಗಲಕೋಟೆ ಜಿಲ್ಲೆಯ ಶಿವಯೋಗ ಮಂದಿರದಲ್ಲಿ ಸೆ. 4ರಂದು ಸಮನ್ವಯ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ADVERTISEMENT

ಸಿದ್ಧಗಂಗಾ ಹಾಗೂ ಸುತ್ತೂರು ಶ್ರೀಗಳು ಪ್ರತ್ಯೇಕ ಧರ್ಮಕ್ಕೆ ಬೆಂಬಲ ನೀಡಿದ್ದಾರೆ ಎಂದು ಸಮಾಜದಲ್ಲಿ ಗೊಂದಲ ಮೂಡಿಸುತ್ತಿರುವ ಬಗ್ಗೆಯೂ ಸಮಾವೇಶದಲ್ಲಿ ಚರ್ಚೆ ನಡೆಸಲಾಗುತ್ತಿದ್ದು, ಅಲ್ಲಿ ಸೂಕ್ತ ಉತ್ತರ ದೊರೆಯಲಿದೆ’ ಎಂದರು.ಕಿಲ್ಲೆಬೃಹನ್ಮಠದ ಶಾಂತಮಲ್ಲ ಶಿವಾಚಾರ್ಯ ಸ್ವಾಮೀಜಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.