ADVERTISEMENT

‘ರೈತರ ಬೆಳೆಗಳಿಗೆ ನೀರು ತಲುಪಿಸಿ’

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2017, 5:18 IST
Last Updated 2 ಡಿಸೆಂಬರ್ 2017, 5:18 IST

ಸಿಂಧನೂರು: ‘ಬಳ್ಳಾರಿ, ಕೊಪ್ಪಳ ಹಾಗೂ ರಾಯಚೂರು ಜಿಲ್ಲೆಗಳ ಜೀವನಾಡಿಯಾದ ತುಂಗಭದ್ರಾ ಜಲಾಶಯದಲ್ಲಿರುವ ನೀರನ್ನು ಸಮರ್ಪಕವಾಗಿ ರೈತರ ಬೆಳೆಗಳಿಗೆ ತಲುಪಿಸುವಲ್ಲಿ ರಾಜ್ಯ ಸರ್ಕಾರ ಮತ್ತು ನೀರಾವರಿ ಅಧಿಕಾರಿಗಳು ವಿಫಲರಾಗಿದ್ದಾರೆ’ ಎಂದು ಮಾಜಿ ಶಾಸಕ ವೆಂಕಟರಾವ್ ನಾಡಗೌಡ ಆರೋಪಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ತುಂಗಭದ್ರಾ ಎಡದಂಡೆ ನಾಲೆ ವ್ಯಾಪ್ತಿಯ ಕಾಲುವೆಗಳು ಹಾಗೂ ಸಿಂಧನೂರು, ಗೊರೇಬಾಳ ಮತ್ತು ಪೋತ್ನಾಳ ಹಳ್ಳಗಳು ತುಂಬಿ ಹರಿಯುತ್ತಿವೆ. ಆದಾಗ್ಯೂ ಕೆಳ ಭಾಗದ ರೈತರ ಬೆಳೆಗೆ ನೀರು ಲಭ್ಯವಾಗುತ್ತಿಲ್ಲ. ಮೇಲ್ಭಾಗದಲ್ಲಿ ಕೆಲವರು ಅಕ್ರಮವಾಗಿ ನೀರು ಪಡೆಯುತ್ತಿದ್ದಾರೆ’ ಎಂದರು.

‘ಅಕ್ರಮವಾಗಿ ನೀರು ಪಡೆಯುತ್ತಿರುವ ಬಗ್ಗೆ ನಿಗಾವಹಿಸಲು ನೀರಾವರಿ ಇಲಾಖೆಯಲ್ಲಿ ಎಇಇ, ಜೆಇ ಹಾಗೂ ಗ್ಯಾಂಗ್‌ಮನ್‌ಗಳ ಕೊರತೆಯಿದೆ. ಗುತ್ತಿಗೆ ಆಧಾರದ ಮೇಲೆ ಎಇಇ, ಜೆಇ ಹಾಗೂ ಗ್ಯಾಂಗ್‌ಮನ್‌ಗಳನ್ನು ನೇಮಿಸಿಕೊಳ್ಳಬೇಕು’ ಎಂದು ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.