ADVERTISEMENT

ಶಾರ್ಟ್ ಸರ್ಕಿಟ್‌: ಬಟ್ಟೆ ಅಂಗಡಿ ಭಸ್ಮ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2017, 8:39 IST
Last Updated 23 ಏಪ್ರಿಲ್ 2017, 8:39 IST

ಸಿಂಧನೂರು: ಇಲ್ಲಿನ ಮಿನಿ ವಿಧಾನಸೌಧದ ಎದುರು ಇರುವ ಅಮಿತ್ ಸೂಪರ್ ಮಾರ್ಕೆಟ್ ಬಟ್ಟೆ ಅಂಗಡಿಯಲ್ಲಿ  ಶನಿವಾರ ಬೆಂಕಿ ಹೊತ್ತಿಕೊಂಡು ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟಿವೆ.ಬೆಳಿಗ್ಗೆ ಏಳು ಗಂಟೆ ಸುಮಾರಿಗೆ ಅಂಗಡಿಯಿಂದ ಸುಟ್ಟ ವಾಸನೆ, ಹೊಗೆ ಬರುತ್ತಿ ರುವುದನ್ನು ಗಮನಿಸಿದ ಸಾರ್ವಜನಿಕರು ಅಂಗಡಿ ಮಾಲೀಕರಿಗೆ  ಮಾಹಿತಿ ನೀಡಿದ್ದಾರೆ. ಆಗ ಅಂಗಡಿ ಮಾಲೀಕರು ಅಗ್ನಿಶಾಮಕ ಸಿಬ್ಬಂದಿಗೆ ತಿಳಿಸಿದ್ದಾರೆ.

ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಸುಮಾರು ಎರಡು ತಾಸು ಕಾರ್ಯಾಚ ರಣೆ ನಡೆಸಿ ಬೆಂಕಿ ಆರಿಸಿದರು.ಶಾರ್ಟ್‌ ಸರ್ಕಿಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ.ಬೆಂಕಿ ಅವಘಡದಲ್ಲಿ ಸುಮಾರು ₹75 ಲಕ್ಷ ಮೌಲ್ಯದ ವಸ್ತುಗಳು ಸುಟ್ಟಿವೆ ಎಂದು  ಅಂಗಡಿ  ಮಾಲೀಕ ಅಮೀತ್ ಶೇಠ್ ಹೇಳಿದ್ದಾರೆ. 
ತಹಶೀಲ್ದಾರ್ ಶಂಕರಪ್ಪ, ಪೊಲೀಸ್ ಉಪವಿಭಾಗಾಧಿಕಾರಿ ಶ್ರೀಧರ್ ಮಾಳಿಗೇರ್, ಸರ್ಕಲ್ ಇನ್‌ಸ್ಪೆಕ್ಟರ್ ರಮೇಶ ರೊಟ್ಟಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT