ADVERTISEMENT

ಶಿಥಿಲಾವಸ್ಥೆ ತಲುಪಿದ ಶಾಲಾ ಕಟ್ಟಡ

​ಪ್ರಜಾವಾಣಿ ವಾರ್ತೆ
Published 6 ಸೆಪ್ಟೆಂಬರ್ 2017, 6:06 IST
Last Updated 6 ಸೆಪ್ಟೆಂಬರ್ 2017, 6:06 IST
ಶಕ್ತಿನಗರ ಬಳಿಯ ಜೇಗರಕಲ್ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕೊಠಡಿ ಚಾವಣಿ ದುಸ್ಥಿತಿಯಲ್ಲಿರುವುದು
ಶಕ್ತಿನಗರ ಬಳಿಯ ಜೇಗರಕಲ್ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕೊಠಡಿ ಚಾವಣಿ ದುಸ್ಥಿತಿಯಲ್ಲಿರುವುದು   

ಶಕ್ತಿನಗರ: ಇಲ್ಲಿನ ಜೇಗರಕಲ್ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲಾವಸ್ಥೆಗೆ ತಲುಪಿದ್ದು , ಮಂಗಳವಾರ ಸುರಿದ ಮಳೆಯಿಂದಾಗಿ ಕೊಠಡಿ ಮಳೆ ನೀರು ಸೋರುತ್ತಿದ್ದರಿಂದ ಶಿಕ್ಷಕರು ಆತಂಕಗೊಂಡು ಮಕ್ಕಳನ್ನು ಮನೆಗೆ ಕಳುಹಿಸಿದರು.

ಶಾಲೆಯಲ್ಲಿ 1ರಿಂದ 7ನೇ ತರಗತಿವರೆಗೆ 372 ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ಐದು ಕೊಠಡಿಗಳು ಶಿಥಿಲಾವಸ್ಥೆ ತಲುಪಿವೆ. ಕೋಣೆಗಳಲ್ಲಿ ಸಣ್ಣ ಮಳೆಯಾದರೂ ಸೋರುತ್ತದೆ. ಕೊಠಡಿಗಳ ಸ್ಥಿತಿ ಕುರಿತು ಮೇಲಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದರು.

ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು ನಿರ್ಲಕ್ಷ ವಹಿಸುತ್ತಿದ್ದಾರೆ. ಅನಾಹುತ ಸಂಭವಿಸಿದರೆ ಇಲಾಖೆ ಉಪ ನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣ ಅಧಿಕಾರಿಗಳು ಹೊಣೆ ಎಂದು ಜೇಗರಕಲ್ ನಿವಾಸಿ ದೇವಪ್ಪ, ಯಲ್ಲಪ್ಪ ಅಂಬಿಗೇರ ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.