ADVERTISEMENT

ಸೂಟ್‌ಕೇಸ್ ಕೊಟ್ಟವರಿಗೆ ಟಿಕೆಟ್ ಮಾಧ್ಯಮಗಳ ಸೃಷ್ಟಿ: ಪ್ರಜ್ವಲ್

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2017, 5:45 IST
Last Updated 5 ಡಿಸೆಂಬರ್ 2017, 5:45 IST
ಪ್ರಜ್ವಲ್ ರೇವಣ್ಣ
ಪ್ರಜ್ವಲ್ ರೇವಣ್ಣ   

ಸಿಂಧನೂರು: ‘ಸೂಟ್‌ಕೇಸ್ ಕೊಟ್ಟವರಿಗೆ ಜೆಡಿಎಸ್‌ನಲ್ಲಿ ಟಿಕೆಟ್ ಸಿಗುತ್ತದೆ ಎಂದು ತಾವು ಹೇಳಿಯೇ ಇಲ್ಲ. ಅರ್ಧದಷ್ಟು ಕ್ಲಿಪ್‌ನ್ನು ತೋರಿಸುವ ಮೂಲಕ ಜನರಿಗೆ ತಪ್ಪು ಸಂದೇಶವನ್ನು ಮಾಧ್ಯಮಗಳು ನೀಡಿವೆ’ ಎಂದು ಜೆಡಿಎಸ್ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ ಸ್ಪಷ್ಟಪಡಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಯುವಕರನ್ನು ಕುರಿತು ಮಾತನಾಡುವ ಸಮಯದಲ್ಲಿ ಸೂಟ್‌ಕೇಸ್ ಹಿಡಿದು ಹೋಗು ವವರು ಮುಂದೆ ಹೋಗುತ್ತಾರೆ. ಪ್ರಾಮಾಣಿಕವಾಗಿ ದುಡಿಯುವ ಯುವ ಕಾರ್ಯಕರ್ತರು ಮುಗ್ಧ ರಾಗಿ ಕುಳಿತುಕೊಳ್ಳುವುದು ಸರಿಯಲ್ಲ. ರಾಜಕೀಯವಾಗಿ ಮುಂದೆ ಬರಬೇಕು ಎಂದು ಸಲಹೆ ನೀಡಿದ್ದನ್ನು ಮಾಧ್ಯಮಗಳು ತಿರುಚಿ ಸೂಟ್‌ಕೇಸ್ ಕೊಟ್ಟವರಿಗೆ ಟಿಕೆಟ್’ ಎಂದು ಬಿಂಬಿಸಿ ಪಕ್ಷದಲ್ಲಿ ಗೊಂದಲ ಉಂಟು ಮಾಡಿವೆ’ ಎಂದು ಹೇಳಿದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರಗಳಲ್ಲಿ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸುತ್ತದೆ. ಈ ಬಾರಿ ಕುಮಾರಣ್ಣ ಸರ್ಕಾರ ಅಸ್ತಿತ್ವಕ್ಕೆ ಬರುವುದು ಶತಸಿದ್ಧ. ದೇವೇಗೌಡರ ಕುಟುಂಬದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಪಕ್ಷದ ಹಿರಿಯರು ಸೂಚನೆ ನೀಡಿದರೆ ಮಾತ್ರ ಸ್ಪರ್ಧಿಸುತ್ತೇನೆ. ಇಲ್ಲದಿದ್ದರೆ ಪಕ್ಷ ಸಂಘಟನೆಯಲ್ಲಿ ಪ್ರಾಮಾಣಿಕವಾಗಿ ಮುಂದು ವರೆಯುತ್ತೇನೆ’ ಎಂದು ಹೇಳಿದರು.

ADVERTISEMENT

ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಇಕ್ಬಾಲ್ ಅನ್ಸಾರಿ ಸೇರಿದಂತೆ ಏಳು ಶಾಸಕರು ಪಕ್ಷ ತೊರೆದಿದ್ದಾರೆ. ಅವರಿಂದ ಪಕ್ಷಕ್ಕೆ ಯಾವುದೇ ಧಕ್ಕೆಯಿಲ್ಲ.ಹಾಗೇ ನೋಡಿದರೆ ಈಗಿನ ಸರ್ಕಾರದ ಸಚಿವಸಂಪುಟದ ಅರ್ಧಕ್ಕಿಂತ ಹೆಚ್ಚು ಸಚಿವರು ಜೆಡಿಎಸ್‌ನಿಂದ ಹೋದವರೇ ಆಗಿದ್ದಾರೆ. ಯಾರು ಹೋದರೂ ಪಕ್ಷ ಚಲನೆಯಲ್ಲಿರುತ್ತದೆ. ಮತ್ತೆ ಅಧಿಕಾರಕ್ಕೆ ಬರುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.