ADVERTISEMENT

12ರಂದು ವೀರಗೋಟದಲ್ಲಿ ಬೃಹತ್ ಉದ್ಯೋಗ ಮೇಳ

ಜಿಲ್ಲಾ ಪಂಚಾಯಿತಿ ಸಿಇಒ ಕೂರ್ಮಾರಾವ್‌ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 10 ಜನವರಿ 2017, 9:54 IST
Last Updated 10 ಜನವರಿ 2017, 9:54 IST
ರಾಯಚೂರು: ಜಿಲ್ಲಾಡಳಿತ ಹಾಗೂ ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ  ದೇವದುರ್ಗ ತಾಲ್ಲೂಕಿನ ತಿಂಥಿಣಿ ಬ್ರಿಡ್ಜ್‌ನ ವೀರಗೋಟ ಗ್ರಾಮದ ಯಾತ್ರಿ ನಿವಾಸದಲ್ಲಿ (ಕಾಗಿನಲೆ ಮಹಾಸಂಸ್ಥಾನ, ಕನಕಗುರುಪೀಠದ ಹತ್ತಿರ) ಜ. 12ರಂದು ಬೆಳಿಗ್ಗೆ 9.30ರಿಂದ ಸಂಜೆ 4.30ರವರೆಗೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಕೂರ್ಮಾರಾವ್‌ ತಿಳಿಸಿದರು.
 
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಳದಲ್ಲಿ 100ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪೆನಿಗಳು ಹಾಗೂ ಸುಮಾರು 50 ಸ್ಥಳೀಯ ಉದ್ಯೋಗದಾತರು ಭಾಗವಹಿಸಲಿದ್ದಾರೆ. 7ನೇ ತರಗತಿಯಿಂದ ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್‌, ಡಿಪ್ಲೋಮಾ, ಐಟಿಐ, ನರ್ಸಿಂಗ್‌ ಶಿಕ್ಷಣ ಪೂರೈಸಿದವರೂ ಭಾಗವಿಸಬಹುದು ಎಂದರು.
 
ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಉಚಿತವಾಗಿ ಬೆಳಿಗ್ಗೆ ಉಪಹಾರ ಮತ್ತು ಮಧ್ಯಾಹದ ಊಟದ ವ್ಯವಸ್ಥೆ ಮಾಡಲಾಗಿದೆ. ಅಂದಾಜು ಐದು ಸಾವಿರ ಉದ್ಯೋಗಾಕಾಂಕ್ಷಿಗಳ ಬರುವ ನಿರೀಕ್ಷೆ ಇದೆ. ಜಿಲ್ಲೆ ಮಾತ್ರವಲ್ಲದೆ ಹೈದರಾಬಾದ್ ಕರ್ನಾಟಕ ಭಾಗದ ನಿರುದ್ಯೋಗಿಗಳೂ ಈ ಮೇಳದಲ್ಲಿ ಭಾಗವಹಿಸಬಹುದು. ಮೇಳಕ್ಕೆ 70 ಸ್ವಯಂ ಸೇವಕರನ್ನು ನಿಯೋಜಿಸಲಾಗಿದೆ ಎಂದರು.
 
ಮೇಳಕ್ಕೆ ಬರುವ ಅಭ್ಯರ್ಥಿಗಳು ಸ್ವವಿವರ, ಎಸ್ಸೆಸ್ಸೆಲ್ಸಿ ಅಂಕಪಟ್ಟಿ ಅಥವಾ ಜನ್ಮ  ಪ್ರಮಾಣ ಪತ್ರ, ಶೈಕ್ಷಣಿಕ ದಾಖಲೆಗಳು, ಅನುಭವದ ಪ್ರಮಾಣ ಪತ್ರ, ಪಾಸ್‌ಪೋರ್ಟ್‌ ಅಳತೆಯ ಭಾವಚಿತ್ರಗಳನ್ನು ತರಬೇಕು ಎಂದರು.
 
ಉದ್ಯೋಗಾಕಾಂಕ್ಷಿಗಳ ಮೇಳದಲ್ಲಿ ಸ್ಥಳದಲ್ಲೇ ನೋಂದಣಿ ಮಾಡಿಕೊಳ್ಳಬಹುದು ಅಥವಾ ನೋಂದಾಣಿಗಾಗಿ ಈ ಕೆಳಕಂಡ ತಾಲ್ಲೂಕುಗಳ ತಹಶೀಲ್ದಾರ್‌ ಕಚೇರಿಯಲ್ಲಿ ಸಂಪರ್ಕಿಸಬಹುದು.
 
ರಾಯಚೂರು– ಬಸವರಾಜ (97401 45489), ದೇವದುರ್ಗ– ಸಿದ್ದನಗೌಡ (.9148203794) ಮತ್ತು ಬಸಪ್ಪ (9742226630), ಲಿಂಗಸುಗೂರು ಕಂದಾಯ ಭವನ ತುಳಾಜ ರಾಮಸಿಂಗ್ (8971929828) ಮತ್ತು ಮಳಿಂಗರಾಯ (9449562119), ಮಾನ್ವಿ–  ಎಂ.ದೇವರಾಜ (9731988755) ಸಿಂಧನೂರು– ಪವನಕುಮಾರ್ (8123861656), ರಾಯಚೂರಿನ ಮಂತ್ರಾಲಯ ರಸ್ತೆಯಲ್ಲಿರುವ ನವೋದಯ ಆಸ್ಪತ್ರೆ ಹಿಂಭಾಗದ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದ ಆವರಣದಲ್ಲಿರುವ  ಸಿ–ಇಒಎಲ್‌ ಕಚೇರಿ ದೂರವಾಣಿ ಸಂಖ್ಯೆ: 08532-200541, ಮೊಬೈಲ್‌ 7815909078, 7411279822, 8150848494, 8618260431, 7829290332, ಇವರನ್ನು ಸಂಪರ್ಕಿಸಬಹುದು.
 
ಪತ್ರಿಕಾ ಗೊಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಇದ್ದರು.
 
**
ನಿರುದ್ಯೋಗಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಮೇಳದ ಲಾಭವನ್ನು ಪಡೆದುಕೊಳ್ಳಬೇಕು
-ಎಂ.ಕೂರ್ಮಾರಾವ್‌, ಜಿ.ಪಂ.ಸಿಇಒ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.