ADVERTISEMENT

160 ಮೆಟ್ರಕ್‌ ಟನ್‌ ಅಕ್ರಮ ಮರಳು ಜಪ್ತಿ

​ಪ್ರಜಾವಾಣಿ ವಾರ್ತೆ
Published 20 ಸೆಪ್ಟೆಂಬರ್ 2017, 6:00 IST
Last Updated 20 ಸೆಪ್ಟೆಂಬರ್ 2017, 6:00 IST

ದೇವದುರ್ಗ: ತಾಲ್ಲೂಕಿನ ಅಂಜೆಸೂಗೂರು ಹೊರವಲಯ ಕೃಷ್ಣಾ ನದಿ ದಂಡೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ಸುಮಾರು 160 ಮೆಟ್ರಿಕ್‌ ಟನ್‌ ಮರಳನ್ನು ಪೊಲೀಸರು ಮಂಗಳವಾರ ಜಪ್ತಿ ಮಾಡಿದ್ದಾರೆ.

ಮರಳು ಅಕ್ರಮ ಸಂಗ್ರಹ ಕುರಿತು ಮಾಹಿತಿ ಆಧರಿಸಿ ಇನ್‌ಸ್ಪೆಕ್ಟರ್‌ ದೌಲತ್‌ ಎನ್‌.ಕುರಿ ಮತ್ತು ಸಬ್‌ ಇನ್‌ಸ್ಪೆಕ್ಟರ್‌ ಬಿ.ಎಸ್‌.ಹೊಸಳ್ಳಿ ಅವರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಅಕ್ರಮವಾಗಿ ಸಂಗ್ರಹಿಸಿರುವ ಬಗ್ಗೆ ಮಾಹಿತಿ ಪಡೆದ ನಂತರ ಕೂಡಲೇ ಅದನ್ನು ಜಪ್ತಿ ಮಾಡಿಕೊಳ್ಳಲಾಗಿದ್ದು, ಸಂಗ್ರಹಿಸಿ ಇಡಲಾಗಿದ್ದ ಸ್ಥಳದ ಮಾಲೀಕರು ಮತ್ತು ಇತರರ ವಿರುದ್ಧ ದೇವದುರ್ಗ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.