ADVERTISEMENT

‘ಗುಣಮಟ್ಟದ ಬೋಧನೆ ಅವಶ್ಯ’

​ಪ್ರಜಾವಾಣಿ ವಾರ್ತೆ
Published 22 ಮೇ 2017, 7:43 IST
Last Updated 22 ಮೇ 2017, 7:43 IST

ರಾಮನಗರ: ‘ಶಿಕ್ಷಕರಾದವರು ವಿದ್ಯಾರ್ಥಿಗಳಿಗೆ ಗುಣಮಟ್ಟದ ಬೋಧನೆ ಮಾಡುವ ಮೂಲಕ ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು’ ಎಂದು ಎಂ.ಎಚ್. ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಎಚ್. ಚಂದ್ರಶೇಖರ್‌ ಹೇಳಿದರು.

ನಗರದ ಎಂ.ಎಚ್. ಸಮೂಹ ಶಿಕ್ಷಣ ಸಂಸ್ಥೆಗಳ ಸಭಾಂಗಣದಲ್ಲಿ ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಗೆ ಈಚೆಗೆ  ಹಮ್ಮಿಕೊಂಡಿದ್ದ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

‘ಶಿಕ್ಷಕರು ವಿದ್ಯಾರ್ಥಿಗಳಿಗೆ ಉತ್ತಮ ಆದರ್ಶಗಳನ್ನು ಹಾಗೂ ಮೌಲ್ಯಗಳನ್ನು ಬೋಧಿಸಬೇಕು. ಇಂದಿನ ವಿದ್ಯಾರ್ಥಿ  ಸಮುದಾಯಕ್ಕೆ ಪಠ್ಯವಿಷಯಗಳಲ್ಲಿರುವ ವಿಷಯಗಳನ್ನು ಮಾತ್ರ ಬೋಧಿಸದೇ ಜೀವನಕ್ಕೆ ಅವಶ್ಯಕವಾದ ಅಂಶಗಳನ್ನು ತಿಳಿಸಬೇಕು. ಭವಿಷ್ಯದ ಜೀವನಕ್ಕೆ ಭದ್ರವಾದ ಅಡಿಪಾಯ ಹಾಕಬೇಕು’ ಎಂದು ತಿಳಿಸಿದರು. 

ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಚ್.ಸಿ. ಅಶ್ವಿನಿ ಮಾತನಾಡಿದರು. ಕಳೆದ ಸಾಲಿನಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಮಟ್ಟದಲ್ಲಿ ಬಿ.ಇಡಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿ ದ್ವಿತೀಯ ಸ್ಥಾನ ಪಡೆದಿರುವ ಕಾವ್ಯಾ ಅವರನ್ನು ಸನ್ಮಾನಿಸಲಾಯಿತು.

ಕಾಲೇಜಿನ ವಿವಿಧ ವಿಭಾಗಗಳ ಪ್ರಾಚಾರ್ಯ ರಾದ ಎಚ್.ಆರ್. ಕುಮಾರ ಸ್ವಾಮಿ, ಎನ್.ಗುರುರಾಜ, ಚೈತ್ರಾ, ಸಹಾಯಕ ಪ್ರಾಧ್ಯಾಪಕರಾದ ಪಾರ್ಥ ಸಾರಥಿ, ಎನ್. ಕಲಾವತಿ, ಟಿ.ಕೆ. ಶಂಕರ್‌, ಎಂ. ಮಮತಾ, ಜಮೀಲ್. ವಿಶ್ವನಾಥ್, ಎಚ್.ಕೆ .ಶೋಭಾ ಇದ್ದರು. ಪ್ರಶಿಕ್ಷಣಾರ್ಥಿಗಳಾದ ಮಂಗಳಗೌರಿ, ಪೂರ್ಣಿಮಾ ಪ್ರಾರ್ಥಿಸಿದರು.  ಜಿ.ಬಿ. ಚೈತ್ರಾ ಸ್ವಾಗತಿಸಿದರು. ಸುಮಯ ಬಾನು ಕಾರ್ಯಕ್ರಮ ನಿರೂಪಿಸಿದರು. ಬಿ.ಎ. ಕಾವ್ಯಾ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.