ADVERTISEMENT

ಜೈಕಾರ, ಗದ್ದಲಕ್ಕೆ ಅವಕಾಶ ಇಲ್ಲ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2017, 5:45 IST
Last Updated 30 ಡಿಸೆಂಬರ್ 2017, 5:45 IST

ದೇವನಹಳ್ಳಿ: ತಾಲ್ಲೂಕಿನ ವಿಜಯಪುರ ಪಟ್ಟಣದಲ್ಲಿ ಡಿ.30 ರಂದು ನಡೆಯಲಿರುವ ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಅಶಿಸ್ತಿಗೆ ಅವಕಾಶವಿಲ್ಲ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಹಾಗೂ ಪ್ರಚಾರ ಸಮಿತಿ ಸದಸ್ಯ ಲಕ್ಷ್ಮಿನಾರಾಯಣ್ ತಿಳಿಸಿದರು. ಪ್ರವಾಸಿ ಮಂದಿರದಲ್ಲಿ ಸಮಾವೇಶ ಕುರಿತು ಕರಪತ್ರ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ವಿಧಾನ ಸಭಾ ಕ್ಷೇತ್ರದಲ್ಲಿ ಪ್ರಸ್ತುತ 18ಮಂದಿ ಟಿಕೆಟ್ ಅಕಾಂಕ್ಷಿತರಿದ್ದಾರೆ. ರಾಷ್ಟ್ರೀಯ ಮತ್ತು ರಾಜ್ಯದ ವರಿಷ್ಠರು, ವಿವಿಧ ಇಲಾಖೆ ಸಚಿವರು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದರು.

ಅಕಾಂಕ್ಷಿತರು ತಮ್ಮ ಬೆಂಬಲಿಗರಿಂದ ಇಂಥವರಿಗೆ ಟಿಕೆಟ್ ನೀಡಬೇಕು ಎಂದು ಜೈಕಾರ, ಕೂಗಾಟ, ಗದ್ದಲ ಸೃಷ್ಟಿಸುವಂತಿಲ್ಲ. ಶಿಸ್ತಿನ ಪಕ್ಷ ಎಂಬುದನ್ನು ಅರ್ಥೈಸಿಕೊಳ್ಳಬೇಕು. ಎಲ್ಲರೂ ಒಗ್ಗಟ್ಟನ್ನು ಕಾಯ್ದುಕೊಳ್ಳಬೇಕು. ಬಹಿರಂಗ ಹೇಳಿಕೆಗಳಿಗೆ ಅವಕಾಶ ಇಲ್ಲ ಎಂದರು.

ADVERTISEMENT

ಪ್ರಚಾರ ಸಮಿತಿ ಸದಸ್ಯರಾದ ಆರ್.ರವಿಕುಮಾರ್, ಜಿ.ಸುರೇಶ್, ಚಿನ್ನಪ್ಪ, ಜಿಲ್ಲಾ ಕಾಂಗ್ರೆಸ್ ಘಟಕ ಪ್ರಧಾನ ಕಾರ್ಯದರ್ಶಿ ಸಿ.ಪ್ರಸನ್ನ ಕುಮಾರ್ ಮಾತನಾಡಿ, ಎಐಸಿಸಿ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಂಸರಾದ ಡಾ.ಎಂ.ವೀರಪ್ಪ ಮೊಯಿಲಿ, ಕೆ.ಎಚ್.ಮುನಿಯಪ್ಪ, ಬಿ.ಕೆ.ಹರಿಪ್ರಸಾದ್, ಅಸ್ಕರ್ ಫರ್ನಾಂಡಿಸ್, ಇಂಧನ ಸಚಿವ ಡಿ.ಕೆ. ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷ ಎಸ್.ಆರ್.ಪಾಟೀಲ್, ಕೃಷಿ ಸಚಿವ ಭೈರೇಗೌಡ, ಸಾರಿಗೆ ಸಚಿವ ಎಚ್.ಎಂ.ರೇವಣ್ಣ, ಆರೋಗ್ಯ ಸಚಿವ ರಮೇಶ್ ಕುಮಾರ್, ಎಐಸಿಸಿ ಸದಸ್ಯ ಮಧುಯಕ್ಷಿಗೌಡ, ರೆಹಮಾನ್ ಖಾನ್ ಭಾಗವಹಿಸಲಿದ್ದಾರೆ ಎಂದರು.

ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅಧ್ಯಕ್ಷತೆ ವಹಿಸುವರು. ಕಾರ್ಯಕ್ರಮದಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಎಚ್.ಟಿ.ಸಾಂಗ್ಲಿಯಾನ, ಬಯಾಪ ಅಧ್ಯಕ್ಷ ಎನ್.ನಾಗರಾಜ್, ರಾಣಿ ಸತೀಶ್, ವಿಧಾನ ಪರಿಷತ್ ಸದಸ್ಯ ಎಸ್. ರವಿ, ಶಾಸಕರಾದ ವೆಂಕಟರಮಣಯ್ಯ, ಜಿಲ್ಲಾ ಪಂಚಾಯತ್ ಅಧ್ಯಕ್ಷ ವಿ.ಪ್ರಸಾದ್, ಉಪಾಧ್ಯಕ್ಷೆ ಅನಂತಕುಮಾರಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಪ್ರಚಾರ ಸಮಿತಿ ಸದಸ್ಯರಾದ ಕೆ.ಸಿ.ಮಂಜುನಾಥ್, ಲಕ್ಷಣ್ ಗೌಡ, ಜಿ.ರಮೇಶ್, ದೇವರಾಜ್, ಸುಧಾಕರ್, ರವಿಕುಮಾರ್, ಶಾಂತಕುಮಾರ್, ಶಂಕರಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.