ADVERTISEMENT

‘ಟಿಕೆಟ್ ಕೊಡದಿದ್ದರೂ ಕಾಂಗ್ರೆಸ್‌ ಪರ ದುಡಿಯುವೆ’

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2017, 4:51 IST
Last Updated 22 ಸೆಪ್ಟೆಂಬರ್ 2017, 4:51 IST

ಬಿಡದಿ: ‘ಮುಂಬರುವ ಚುನಾವಣೆಯಲ್ಲಿ ನನಗೇ ಟಿಕಟ್ ಕೊಡ್ತೀವಿ ಅಂತ ಕಾಂಗ್ರೆಸ್ ಖಚಿತಪಡಿಸಿಲ್ಲ. ಟಿಕೆಟ್ ಸಿಗದಿದ್ದರೂ ಪಕ್ಷಕ್ಕಾಗಿ ದುಡಿಯುವೆ’ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಹೇಳಿದರು.

ರಾಮನಹಳ್ಳಿ ಗ್ರಾಮದಲ್ಲಿ ₹20 ಲಕ್ಷ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ವೇಳೆ ಅವರು ಪತ್ರಕರ್ತರ ಜೊತೆ ಮಾತನಾಡಿದರು.

‘ಎ.ಮಂಜು ಕಾಂಗ್ರೆಸ್ ತೊರೆದ ನಂತರ ಮಾಗಡಿ ಕ್ಷೇತ್ರದಲ್ಲಿ ಪಕ್ಷಕ್ಕೆ ಬಾಲಕೃಷ್ಣರೇ ಮುಖ್ಯಸ್ಥರು’ ಎಂಬ ಆರೋಪಗಳ ಕುರಿತು ಪ್ರತಿಕ್ರಿಯಿಸಿ ‘ನನಗಿಂತ ಹಿರಿಯರಾಗಿ ಸಚಿವ ಎಚ್.ಎಂ.ರೇವಣ್ಣ, ವಿಧಾನ ಪರಿಷತ್‌ ಸದಸ್ಯ ಸಿ.ಎಂ. ಲಿಂಗಪ್ಪ ಇದ್ದಾರೆ. ಪಕ್ಷದ ವರಿಷ್ಠರ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ’ ಎಂದರು.

ADVERTISEMENT

ಲೂಸ್ ಟಾಕ್‌: ‘ಜಿಲ್ಲಾ ಪಂಚಾಯಿತಿ ಸದಸ್ಯ ಎ.ಮಂಜು ಲೂಸ್ ಟಾಕ್ಸ್, ಅಂತಹ ಹೇಳಿಕೆಗಳಿಗೆ ಲೂಸ್ ಆಗಿಯೇ ಉತ್ತರ ಕೊಡಬೇಕಾಗಿದೆ, ಅದು ನನ್ನಿಂದಾಗದು. ಹೀಗಾಗಿ ಪ್ರತಿಕ್ರಿಯಿಸಲ್ಲ’ ಎಂದರು.

‘ಬಿಬಿಎಂಪಿ ಮೇಯರ್ ಚುನಾವಣೆ ವಿಚಾರದಲ್ಲಿ ಸಂಸದ ಡಿ.ಕೆ.ಸುರೇಶ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಂದ ಮಾತ್ರಕ್ಕೆ ಅದು ಭಿನ್ನಮತವಲ್ಲ’ ಎಂದು ಸಮರ್ಥಿಸಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.