ADVERTISEMENT

‘ಪೌರ ಸಂಸ್ಥೆಗಳಲ್ಲಿ ಹುದ್ದೆಗಳ ನೇಮಕಾತಿಗೆ ಕ್ರಮ’

​ಪ್ರಜಾವಾಣಿ ವಾರ್ತೆ
Published 21 ಜುಲೈ 2017, 9:06 IST
Last Updated 21 ಜುಲೈ 2017, 9:06 IST

ಚನ್ನಪಟ್ಟಣ: ‘14ನೇ ಹಣಕಾಸು ಯೋಜನೆ, ಎಸ್.ಎಫ್.ಸಿ. (ವಿಶೇಷ ಅನು ದಾನ) ಹಾಗೂ ನಗರಸಭೆ ಅನುದಾನ ಸದ್ಬಳಕೆ ಮಾಡಿಕೊಂಡು ನಗರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡುವಂತೆ’ ಪೌರಾಡಳಿತ ಸಚಿವ ಈಶ್ವರ ಬಿ.ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣದ ನಗರಸಭೆ ಸಭಾಂಗಣ ದಲ್ಲಿ ಗುರುವಾರ ನಡೆದ ಪ್ರಗತಿ ಪರಿ ಶೀಲನಾ ಸಭೆಯಲ್ಲಿ ಮಾತನಾಡಿದರು.

‘ಆಸ್ತಿ ತೆರಿಗೆ, ಕುಡಿಯುವ ನೀರಿನ ಕರ, ವಾಣಿಜ್ಯ ಕರ, ಮಳಿಗೆಗಳ ಬಾಡಿಗೆ ಸೇರಿದಂತೆ ಎಲ್ಲ ಆದಾಯ ಕ್ರೋಡೀಕರಿಸಿ ಕೊಂಡು ಅಭಿವೃದ್ಧಿಗೆ ಮುಂದಾಗಬೇಕು’ ಎಂದು ಸೂಚನೆ ನೀಡಿದರು. ‘ಕಾಂಗ್ರೆಸ್ ಸರ್ಕಾರ ನಗರಗಳ ಅಭಿವೃದ್ಧಿಗೆ ಹಲವಾರು ಯೋಜನೆ ಹಮ್ಮಿಕೊಂಡಿದೆ. ನಗರೋತ್ಥಾನ 3₹ 2,886 ಕೋಟಿ ಕ್ರಿಯಾ ಯೋಜನೆಗೆ ಮುಖ್ಯಮಂತ್ರಿ ಮಂಜೂರಾತಿ ನೀಡಿ ದ್ದಾರೆ. ಸದ್ಯ ಯೋಜನೆ ಟೆಂಡರ್ ಹಂತದಲ್ಲಿದೆ’ ಎಂದು ಸಚಿವರು ತಿಳಿಸಿದರು.

ಇದರ ಜತೆಗೆ ಮುಖ್ಯಮಂತ್ರಿಗಳ ವಿಶೇಷ ಅನುದಾನವೂ ಸಹ ಅಭಿವೃದ್ಧಿಗೆ ಲಭ್ಯವಾಗುತ್ತಿದೆ. ಪೌರ ಸಂಸ್ಥೆಗಳಲ್ಲಿ ಅಗತ್ಯವಿರುವ ಹುದ್ದೆಗಳ ನೇಮಕಾತಿಗಾಗಿ ಕ್ರಮ ಕೈಗೊಳ್ಳಲಾಗುತ್ತಿದೆ, ಇದೆಲ್ಲವನ್ನೂ ಬಳಸಿಕೊಂಡು ಅಭಿವೃದ್ಧಿಗೆ ಆದ್ಯತೆ ನೀಡ ಬೇಕು ಎಂದು ಸಚಿವರು ಸೂಚಿಸಿದರು.

ADVERTISEMENT

ನಗರಸಭೆಯಲ್ಲಿ ಅಧಿಕಾರಿಗಳ ಕೊರತೆಯಿರುವ ಬಗ್ಗೆ ಸದಸ್ಯರು ವಿಚಾರ ನಿವೇದಿಸಿಕೊಂಡಾಗ ಕೂಡಲೇ ಸ್ಪಂದಿಸಿದ ಸಚಿವರು, ‘ಆರೋಗ್ಯ ವಿಭಾ ಗಕ್ಕೆ ಒಬ್ಬ ನಿರೀಕ್ಷಕನನ್ನು  ಕೂಡಲೇ ನಿಯುಕ್ತಿಗೊಳಿಸುವಂತೆ ಮೇಲಧಿಕಾರಿಗೆ ಸೂಚನೆ ನೀಡಿದರು’.

‘ಕೆಲವು ಸದಸ್ಯರು ಅಧಿಕಾರಿಗಳು ನಮ್ಮ ಮಾತು ಕೇಳುತ್ತಿಲ್ಲ. ಯಾವುದೇ ಕೆಲಸಕ್ಕೂ ಸ್ಪಂದನೆ ನೀಡುತ್ತಿಲ್ಲ. ನಗರ ಸಭೆಯಲ್ಲಿ ಲಂಚ ತಾಂಡವಾಡುತ್ತಿದೆ ಎಂದು ಆರೋಪಿಸಿದಾಗ, ‘ಎಲ್ಲ ಸಮಸ್ಯೆಗಳನ್ನು ಆಲಿಸಿದ ಸಚಿವರು ಈ ಬಗ್ಗೆ ಕ್ರಮ ವಹಿಸಲಾಗುವುದು, ಅಧಿಕಾ ರಿಗಳು, ಸಿಬ್ಬಂದಿ ಅವ್ಯವಹಾರ ದಲ್ಲಿ ತೊಡಗಿದ್ದ ಬಗ್ಗೆ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು. ನಗರಸಭೆ ಅಧ್ಯಕ್ಷೆ ನಜ್ಮುನ್ನೀಸಾ, ಉಪಾಧ್ಯಕ್ಷೆ ಸರಳ, ಸ್ಥಾಯಿ ಸಮಿತಿ ಅಧ್ಯಕ್ಷ ರಾಮು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.