ADVERTISEMENT

ಬೇಧಿ ಪ್ರಕರಣ: ನಿಯಂತ್ರಣಕ್ಕೆ ಸೂಚನೆ

​ಪ್ರಜಾವಾಣಿ ವಾರ್ತೆ
Published 26 ಮೇ 2017, 10:24 IST
Last Updated 26 ಮೇ 2017, 10:24 IST

ರಾಮನಗರ: ‘ಐದು ವರ್ಷದ ಒಳಗಿನ ಮಕ್ಕಳ ಮರಣಕ್ಕೆ ಕಾರಣವಾಗುವ ಅತಿಸಾರ ಬೇಧಿಯನ್ನು ನಿಯಂತ್ರಿಸಿ, ಮರಣ ಪ್ರಮಾಣವನ್ನು ತಡೆಗಟ್ಟಲು ಜೂನ್‌ 12ರಿಂದ 24ರವರೆಗೆ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ ಬಿ.ಆರ್. ಮಮತಾ ಅವರು ತಿಳಿಸಿದರು.

ನಗರದ ಜಿಲ್ಲಾ ಕಚೇರಿಗಳ ಸಂಕೀರ್ಣದ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಅತಿಸಾರ ಬೇಧಿ ತೀವ್ರತರ ನಿಯಂತ್ರಣ ಪಾಕ್ಷಿಕ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.

‘ಅತಿಸಾರ ಬೇಧಿಯಿಂದ ಮಕ್ಕಳ ಮರಣ ಪ್ರಮಾಣ ಶೂನ್ಯಗೊಳಿಸಬೇಕು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಈ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು’ ಎಂದು ಅವರು ಅಧಿಕಾರಿಗಳಿಗೆ ಈ ಸಂದರ್ಭದಲ್ಲಿ ತಿಳಿಸಿದರು.

ADVERTISEMENT

‘ಅಂಗನವಾಡಿ ಕಾರ್ಯಕರ್ತೆಯರಿಗೆ ಐ.ಡಿ.ಸಿ.ಎಫ್ ಕಾರ್ಯಕ್ರಮದಲ್ಲಿ ಭಾಗವಹಿಸಲು ಹಾಗೂ ಅಂಗನವಾಡಿ ಕೇಂದ್ರಗಳಲ್ಲಿ ಓ.ಆರ್.ಎಸ್-ಜಿಂಕ್ ಕಾರ್ನರ್‌ಗಳನ್ನು ಸ್ಥಾಪಿಸಿ ಸಾರ್ವಜನಿಕರಿಗೆ (ಮಕ್ಕಳ ಪೋಷಕರಿಗೆ) ತಿಳಿವಳಿಕೆ ನೀಡಬೇಕು’ ಎಂದು ಅವರು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಪಿ. ಶೈಲಜಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಪ್ರಶಾಂತ್, ಕಾನೂನು ಪ್ರಾಧಿಕಾರದ ಸದಸ್ಯ ಹೊನ್ನಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಭಾರ ಅಧಿಕಾರಿ ಡಾ.ಆರ್.ಎನ್. ಲಕ್ಷ್ಮೀಪತಿ, ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಗಂಗಾಧರ್, ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಶಸ್ತ್ರ ಚಿಕಿತ್ಸಕ ಡಾ.ಎಂ.ಕೆ. ಮುನಿರಾಜು, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೆ.ವಿ. ಶಿವರಾಜ್‌ ಮತ್ತಿತರರು ಸಭೆಯಲ್ಲಿ  ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.