ADVERTISEMENT

ಮಿಲಿಟರಿ ಕಾಲೇಜು: ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2014, 9:34 IST
Last Updated 19 ಸೆಪ್ಟೆಂಬರ್ 2014, 9:34 IST

ರಾಮನಗರ: ಉತ್ತರಖಂಡ ರಾಜ್ಯದ ಡೆಹರಾಡೂನ್‌ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜಿನಲ್ಲಿ ಬಾಲಕರ 8ನೇ ತರಗತಿ ಪ್ರವೇಶಕ್ಕೆ ಪ್ರವೇಶ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ.

ಪ್ರವೇಶ ಪರೀಕ್ಷೆಯು ಡಿಸೆಂಬರ್‌ 1 ಮತ್ತು 2ರಂದು ಬೆಂಗಳೂರು ಕೇಂದ್ರದಲ್ಲಿ ನಡೆಯಲಿದೆ. ವಿದ್ಯಾರ್ಥಿಯು ಸರ್ಕಾರದಿಂದ  ಮಾನ್ಯತೆ ಪಡೆದಿರುವ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ಅಥವಾ ಉತ್ತೀರ್ಣರಾಗಿರುವ ಹಾಗೂ ದಿನಾಂಕ 1ನೇ ಜುಲೈ 2015ಕ್ಕೆ 11 ವರ್ಷ 6 ತಿಂಗಳಿಂದ 13 ವರ್ಷದೊಳಗಿನ ಬಾಲಕರು ಮಾತ್ರ ಪ್ರವೇಶ ಪರೀಕ್ಷೆಗೆ ಅರ್ಹರಿರುತ್ತಾರೆ.

ವಿವರಣಾ ಪತ್ರ ಹಾಗೂ ಹಳೆ ಪ್ರಶ್ನೆ ಪತ್ರಿಕೆಗಳನ್ನೊಳಗೊಂಡ ಅರ್ಜಿ ನಮೂನೆಯನ್ನು ಕೋರಿಕೆ ಪತ್ರದ ಜತೆ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಭವನ, ನಂ.58, ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ರಸ್ತೆ, ಬೆಂಗಳೂರು 560025 ಇಲ್ಲಿಗೆ ದಿ ಕಮಾಡೆಂಟ್ ಆರ್.ಐ.ಎಂ.ಸಿ ಡೆಹರಾಡೂನ್ ಇವರ ಹೆಸರಿಗೆ ಸಾಮಾನ್ಯ ಅಭ್ಯರ್ಥಿಗಳು ₨400 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ₨ 355 ಡಿ.ಡಿ. ಸಲ್ಲಿಸಿ ಖುದ್ದಾಗಿ ಪಡೆಯಬಹುದು.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 080-25589459 ಅಥವಾ ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಕಾರ್ಯಲಯವನ್ನು ಸಂಪರ್ಕಿಸಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.