ADVERTISEMENT

ರಾಮನಗರ: 8 ನಾಮಪತ್ರಗಳು ತಿರಸ್ಕೃತ; 57 ಅಂಗೀಕೃತ

ಉಮೇದುವಾರಿಕೆ ಹಿಂಪಡೆಯಲು ನಾಳೆ ಕಡೆಯ ದಿನ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2018, 13:14 IST
Last Updated 26 ಏಪ್ರಿಲ್ 2018, 13:14 IST

ರಾಮನಗರ: ಮೇ 12ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಸಲ್ಲಿಕೆಯಾಗಿರುವ ನಾಮಪತ್ರಗಳ ಪರಿಶೀಲನೆ ಕಾರ್ಯವು ಜಿಲ್ಲೆಯ ನಾಲ್ಕೂ ವಿಧಾನಸಭಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಬುಧವಾರ ನಡೆಯಿತು.

ನಾಲ್ಕು ವಿಧಾನಸಭಾ ಕ್ಷೇತ್ರಗಳ 65 ಅಭ್ಯರ್ಥಿಗಳ ಪೈಕಿ 8 ಅಭ್ಯರ್ಥಿಗಳ ನಾಮಪತ್ರಗಳು ವಿವಿಧ ಕಾರಣಗಳಿಂದಾಗಿ ತಿರಸ್ಕೃತಗೊಂಡಿದ್ದು, 57 ಅಭ್ಯರ್ಥಿಗಳ ನಾಮಪತ್ರಗಳು ಅಂಗೀಕೃತಗೊಂಡಿದೆ.

ರಾಮನಗರ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು 18 ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿದ್ದರು. ಇವುಗಳಲ್ಲಿ 13 ಅಭ್ಯರ್ಥಿಗಳ ನಾಮಪತ್ರ ಅಂಗೀಕೃತಗೊಂಡು, 5 ಅಭ್ಯರ್ಥಿಗಳ ನಾಮಪತ್ರಗಳು ತಿರಸ್ಕೃತಗೊಂಡಿವೆ.

ADVERTISEMENT

ಜೆಡಿಯು ಅಭ್ಯರ್ಥಿ ರವಿಕುಮಾರ್, ಆಮ್ ಆದ್ಮಿ ಪಾರ್ಟಿಯ ಎಂ.ಎನ್. ಅಜಿತ್ ಬಾಬು, ರಾಷ್ಟೀಯ ಮಾನವತ ವಿಕಾಸ ಪಕ್ಷದ ಮುನಿರಾಜು, ಎಐಎಂಇಪಿ ಪಕ್ಷದ ಅಭ್ಯರ್ಥಿ ಮೀನಾ ನಾಗರಾಜ್ ಹಾಗೂ ಎಎಸ್ ಪಿ ಪಕ್ಷದ ಹುರಿಯಾಳು ಬಿ.ಕೆ ಬೈರಲಿಂಗಯ್ಯ ಅವರ ನಾಮಪತ್ರಗಳು ವಿವಿಧ ಕಾರಣಗಳಿಂದ ತಿರಸ್ಕೃತಗೊಂಡಿವೆ.

ಮಾಗಡಿ ವಿಧಾನಸಭಾ ಕ್ಷೇತ್ರಕ್ಕೆ 12 ಅಭ್ಯರ್ಥಿಗಳು ನಾಮಪತ್ರಗಳನ್ನು ಸಲ್ಲಿಸಿದ್ದು, ಇವುಗಳ ಪೈಕಿ 11 ಅಭ್ಯರ್ಥಿಗಳ ನಾಮಪತ್ರ ಅಂಗೀಕೃತಗೊಂಡಿದೆ. ಬಿಜೆಪಿಯ ಎರಡನೇ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಎಚ್.ಎನ್. ಶಿವಲಿಂಗಯ್ಯ ಅವರ ನಾಮಪತ್ರ ತಿರಸ್ಕತಗೊಂಡಿದೆ.

ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ 15 ಅಭ್ಯರ್ಥಿಗಳು ನಾಮಪತ್ರಗಳು ಸಲ್ಲಿಸಿದ್ದಾರೆ. ಇದರಲ್ಲಿ 14 ಅಭ್ಯರ್ಥಿಗಳ ನಾಮಪತ್ರ ಅಂಗೀಕೃತಗೊಂಡು, ಒಬ್ಬರು ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದೆ. ಅಂಬೇಡ್ಕರ್ ಸಮಾಜ ಪಾರ್ಟಿ ಬಿ.ಎಸ್. ಮಹೇಶ್ ಅವರ ನಾಮಪತ್ರ ತಿರಸ್ಕೃತಗೊಂಡಿದೆ.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ 20 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಅವರ ಪೈಕಿ 19 ನಾಮಪತ್ರಗಳು ಅಂಗೀಕೃತಗೊಂಡು ಒಂದು ನಾಮಪತ್ರ ತಿರಸ್ಕೃತಗೊಂಡಿದೆ. ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷದ ಅಭ್ಯರ್ಥಿ ಅಕ್ರಮ್ ಆಲಿಖಾನ್ ಅವರ ನಾಮಪತ್ರ ತಿರಸ್ಕೃತಗೊಂಡಿದೆ. ನಾಮಪತ್ರ ಹಿಂಪಡೆಯಲು ಇದೇ 27 ಕಡೆಯ ದಿನವಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.