ADVERTISEMENT

ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

​ಪ್ರಜಾವಾಣಿ ವಾರ್ತೆ
Published 2 ಜುಲೈ 2015, 9:25 IST
Last Updated 2 ಜುಲೈ 2015, 9:25 IST

ಚನ್ನಪಟ್ಟಣ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಂಡು ಸಾಧಕರಾಗಬೇಕು ಎಂದು ಸಮಾಜ ಸೇವಕ ರಾಂಪುರ ರಾಜಣ್ಣ ಕರೆ ನೀಡಿದರು.

ಪಟ್ಟಣದ ಚನ್ನಾಂಬಿಕ ವಿದ್ಯಾಸಂಸ್ಥೆಯಲ್ಲಿ ಭಾರತ ವಿಕಾಸ ಪರಿಷದ್ ಕಣ್ವ ಶಾಖೆ ಇತ್ತೀಚಿಗೆ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಹಿರಿಯ ಕನ್ನಡಪರ ಹೋರಾಟಗಾರ ಸಿಂ.ಲಿಂ.ನಾಗರಾಜು ಮಾತನಾಡಿದರು.

ಭಾರತ ವಿಕಾಸ ಪರಿಷದ್ ಕಣ್ವಶಾಖೆ ಅಧ್ಯಕ್ಷ ವಸಂತಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಪ್ರಾಂಶುಪಾಲ ಬಿ.ವಿ.ಜಯರಾಮೇಗೌಡ, ಚನ್ನಾಂಬಿಕ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಪೂರ್ಣಿಮಾ, ನಿಂಗೇಗೌಡ, ಭಾ.ವಿ.ಪ. ಪದಾಧಿಕಾರಿಗಳಾದ  ನಾಮದೇವ್, ಬಸವರಾಜು, ಕೃಷ್ಣಪ್ಪ, ಗ್ರಾಮ ಪಂಚಾಯಿತಿ ಸದಸ್ಯರಾದ ಅನಿಲ್ ಕುಮಾರ್, ಸ್ವಾಮಿ, ಪ್ರಾಂಶುಪಾಲ ವಿಜಯ್ ರಾಂಪುರ, ಲಕ್ಷ್ಮೀಪತಿ, ಶಿಕ್ಷಕ ಯೋಗೇಶ್, ಉಪನ್ಯಾಸಕರಾದ ದಿನೇಶ್, ಬಾಬು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಎಸ್ಸೆಸ್ಸೆಲ್ಸಿಯಲ್ಲಿ ಹೆಚ್ಚು ಅಂಕಗಳಿಸಿದ ಬಿ.ಸಿಂಧುಶ್ರೀ, ಸಿ.ದರ್ಶನ್, ಹಾಗೂ ದ್ವಿತೀಯ ಪಿ.ಯು.ಸಿ.ಯಲ್ಲಿ ಹೆಚ್ಚು ಅಂಕಗಳಿಸಿದ ಆರ್.ರೂಪ (ವಿಜ್ಞಾನ ವಿಭಾಗ), ಎ.ಎಸ್.ಅರ್ಬಿಯ (ವಾಣಿಜ್ಯ ವಿಭಾಗ) ಹಾಗೂ ಕಾವ್ಯ (ಕಲಾ ವಿಭಾಗ) ಅವರನ್ನು ಸನ್ಮಾನಿಸಲಾಯಿತು.

ವಿದ್ಯಾರ್ಥಿಗಳು ಉತ್ತಮ ಸಾಧಕರನ್ನು ಸ್ಪೂರ್ತಿಯಾಗಿಸಿಕೊಂಡು  ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು
ಬಿ.ವಿ.ಜಯರಾಮೇಗೌಡ, ಪ್ರಾಂಶುಪಾಲ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.