ADVERTISEMENT

‘ಹಿಂದುಳಿದವರಿಗೆ ಎಚ್‌ಡಿಕೆ ಕೊಡುಗೆ ಅಪಾರ’

ಹೊಂಗನೂರು ಗ್ರಾಮದಲ್ಲಿ ಜೆಡಿಎಸ್‌ ಪಕ್ಷಕ್ಕೆ ದಲಿತ ಮುಖಂಡರ ಸೇರ್ಪಡೆ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2018, 13:23 IST
Last Updated 26 ಏಪ್ರಿಲ್ 2018, 13:23 IST

ಚನ್ನಪಟ್ಟಣ: ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ದಲಿತರು ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿದ್ದು, ಅವರನ್ನು ಎಲ್ಲರೂ ಬೆಂಬಲಿಸಬೇಕು ಎಂದು ‘ಬಮೂಲ್’ ನಿರ್ದೇಶಕ ಎಸ್.ಲಿಂಗೇಶ್ ಕುಮಾರ್ ಹೇಳಿದರು.

ತಾಲ್ಲೂಕಿನ ಹೊಂಗನೂರು ಗ್ರಾಮದಲ್ಲಿ ದಲಿತ ಮುಖಂಡರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಅವರು ಮಾತನಾಡಿದರು.ಕಾಂಗ್ರೆಸ್ ಹಾಗೂ ಬಿಜೆಪಿಗಳು ದಲಿತರಿಗಾಗಿ ಏನನ್ನೂ ಮಾಡಿಲ್ಲ. ಕೇವಲ ಮತ ಬ್ಯಾಂಕುಗಳನ್ನಾಗಿ ಮಾಡಿಕೊಂಡು ಅಧಿಕಾರ ಅನುಭವಿಸುತ್ತಿವೆ ಎಂದು ದೂರಿದರು. ಆ ಪಕ್ಷಗಳನ್ನು ಈ ಬಾರಿ ತಿರಸ್ಕರಿಸಿ ಜೆಡಿಎಸ್ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

‘ಕುಮಾರಸ್ವಾಮಿ ಅವರು ಅಭ್ಯರ್ಥಿಯಾಗಿರುವುದರಿಂದ ವಿವಿಧ ಪಕ್ಷಗಳ ಮುಖಂಡರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ. ಮುಖ್ಯಮಂತ್ರಿ ಅಭ್ಯರ್ಥಿಯಾಗಿರುವ ಕುಮಾರಸ್ವಾಮಿ ಅವರನ್ನು ಗೆಲ್ಲಿಸಿದರೆ ರಾಜ್ಯದಾದ್ಯಂತ ತಾಲ್ಲೂಕಿನ ಹೆಸರು ಚಿರಸ್ಥಾಯಿಯಾಗಿ ಉಳಿಯುತ್ತದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಸಮಗ್ರ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂಬುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು’ ಎಂದು ತಿಳಿಸಿದರು.

ADVERTISEMENT

ಮುಖಂಡ ಟಿ.ಪಿ.ಪುಟ್ಟಸಿದ್ದೇಗೌಡ ಮಾತನಾಡಿ, ದಲಿತರನ್ನು ಕಾಂಗ್ರೆಸ್ ಕೇವಲ ಚುನಾವಣೆ ವೇಳೆ ಮತಕ್ಕಾಗಿ
ಬಳಸಿಕೊಂಡು ಅನಂತರ ಸುಮ್ಮನಾಗುತ್ತಿದೆ. ಇದನ್ನು ದಲಿತರು ತಿಳಿದುಕೊಳ್ಳಬೇಕು. ಆರ್ಥಿಕ ಅಭಿವೃದ್ಧಿಗಾಗಿ ಕಾಂಗ್ರೆಸ್ ಯಾವುದೇ ಕ್ರಮ ಕೈಗೊಂಡಿಲ್ಲ. ಇನ್ನು ತಾಲ್ಲೂಕಿನಲ್ಲಿ ದಲಿತರ ಏಳಿಗೆಗೆ ಶಾಸಕರ ಕೊಡುಗೆ ಏನೂ ಇಲ್ಲ ಎಂಬುದು ಎಲ್ಲರಿಗೂ ತಿಳಿದಿದೆ. ಹಾಗಾಗಿ ಈ ಬಾರಿ ಜೆಡಿಎಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಪಕ್ಷಕ್ಕೆ ಸೇರ್ಪಡೆಗೊಂಡ ಗ್ರಾಮ ಪಂಚಾಯಿತಿ ಸದಸ್ಯ ರವಿಕುಮಾರ್ ಮಾತನಾಡಿ, ‘ಪಕ್ಷಕ್ಕೆ ಮುಂದಿನ ದಿನ
ಗಳಲ್ಲಿ ಭವಿಷ್ಯವಿದೆ. ಸರ್ಕಾರ ರಚನೆಯಾದಲ್ಲಿ ಸಮಗ್ರ ಅಭಿವೃದ್ದಿ ಮಾಡುತ್ತಾರೆಂಬ ಆಕಾಂಕ್ಷೆಯಿಂದ ನಾನು ಸೇರ್ಪಡೆ
ಯಾಗಿದ್ದೇನೆ. ಜತೆಗೆ ಇನ್ನಷ್ಟು ಮಂದಿ ಬೆಂಬಲಿಗರು, ಮುಖಂಡರು ಸೇರ್ಪಡೆಯಾಗಿ ಅಭ್ಯರ್ಥಿ ಗೆಲುವಿಗೆ ಕೈಜೋಡಿ
ಸಲಿದ್ದಾರೆ’ ಎಂದರು.

ಮುಖಂಡರಾದ ಹನುಮಂತೇಗೌಡ, ಬಿಳಿಯಪ್ಪ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.