ADVERTISEMENT

ಹೈನುಗಾರಿಕೆ, ರೇಷ್ಮೆಯಿಂದ ಆರ್ಥಿಕ ಸ್ಥಿತಿ ಸುಧಾರಣೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2017, 9:46 IST
Last Updated 19 ಸೆಪ್ಟೆಂಬರ್ 2017, 9:46 IST

ಸೋಲೂರು(ಮಾಗಡಿ): ಗ್ರಾಮೀಣ ಭಾಗದ ರೈತರು ಸಾಂಪ್ರದಾಯಿಕ ಕೃಷಿ ಪದ್ಧತಿಯಲ್ಲಿ ಬದಲಾವಣೆ ಮಾಡಿಕೊಂಡು, ಹೈನುಗಾರಿಕೆ ಮತ್ತು ರೇಷ್ಮೆಯಿಂದ ಆರ್ಥಿಕ ಸ್ಥಿತಿ ಸುಧಾರಿಸಿಕೊಳ್ಳಲು ಮುಂದಾಗಬೇಕು ಎಂದು ನೆಲಮಂಗಲ ಶಾಸಕ ಡಾ.ಶ್ರೀನಿವಾಸಮೂರ್ತಿ ತಿಳಿಸಿದರು.

ಲಕ್ಕೇನಹಳ್ಳಿಯಲ್ಲಿ ಬೆಂಗಳೂರು ಹಾಲು ಒಕ್ಕೂಟ ಮತ್ತು ಇತರೆ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ₹10.50 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಮತ್ತು ಐದು ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಿಸಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯತಿ ಸದಸ್ಯ ಹನುಮಂತಯ್ಯ ಮಾತನಾಡಿ, ಗ್ರಾಮದಲ್ಲಿ ಸುಮಾರು 20 ವರ್ಷಗಳಿಂದ ಖಾಸಗಿ ಕಟ್ಟಡದಲ್ಲಿ ಚಟುವಟಿಕೆ ನಡೆಸುತ್ತಿದ್ದೆವು. ಬೆಂಗಳೂರು ಹಾಲು ಒಕ್ಕೂಟ, ಧರ್ಮಸ್ಥಳ ಕ್ಷೇಮಾಭಿವೃದ್ಧಿ ಸಂಘ, ಲಕ್ಕೆನಹಳ್ಳಿ ಗ್ರಾಮ ಪಂಚಾಯತಿ ಸಹಕಾರದೊಂದಿಗೆ ನೂತನ ಅವಳಿ ಕಟ್ಟಡ ಕಟ್ಟಿಸಲಾಗಿದೆ ಎಂದು ಹೇಳಿದರು.

ADVERTISEMENT

ಗ್ರಾಮಗಳಲ್ಲಿ ಅಂತರ್ಜಲ ಮಟ್ಟ ಕುಸಿಯುತ್ತಿರುವುದರಿಂದ ನೀರಿ ನಲ್ಲಿ ಫ್ಲೋರೈಡ್ ಅಂಶ ಹೆಚ್ಚಿದೆ. ಶುದ್ಧ ಕುಡಿಯುವ ನೀರಿನ ಘಟಕ ಅಗತ್ಯವನ್ನು ಮನಗಂಡು ನೂತನ ಘಟಕ ನಿರ್ಮಿಸಿದ್ದೇವೆ ಎಂದು ಗ್ರಾಮ ಪಂಚಾಯತಿ ಅಧ್ಯಕ್ಷೆ ಪದ್ಮಾ ಹನುಮಂತರಾಯಪ್ಪ ಅವರು ತಿಳಿಸಿದರು. ವ್ಯವಸಾಯ ಉತ್ಪನ್ನ ಸಹಕಾರ ಸಂಘದ ಅಧ್ಯಕ್ಷ ರಾಜಣ್ಣ, ಕಾರ್ಯದರ್ಶಿ ರೇವಣ್ಣ, ನಿರ್ದೇಶಕ ಸುರೇಶರಾವ್‌ ಮಾತನಾಡಿದರು.

ಬಿಡಿಇಸಿಸಿ ಬ್ಯಾಂಕ್‌ ನಿರ್ದೇಶಕ ಅಶೋಕ,ಹಾಲು ಒಕ್ಕೂಟ ನಿರ್ದೇಶಕ ನರಸಿಂಹ ಮೂರ್ತಿ, ಲಕ್ಕೇನಹಳ್ಳಿ ಗ್ರಾಮ ಪಂಚಾಯತಿ ಸದಸ್ಯರಾದ ಚನ್ನಗಂಗಯ್ಯ, ಕುಮಾರ, ಬಲರಾಮ, ಗೌರಮ್ಮ, ಕೃಷ್ಣಪ್ಪ, ಗಂಗರಾಜು, ಬೃಂಗೇಶ ಡೈರಿ ವಿಸ್ತಾರಣಾ ಅಧಿಕಾರಿಗಳಾದ ಗೋಪಾಲಕೃಷ್ಣ, ಚೆಲುವರಂಗಯ್ಯ, ಮುಖಂಡರಾದ ಬೈರನರಸಯ್ಯ, ನರಸಿಂಹಮೂರ್ತಿ ರಾವ್‌, ಹನುಮಂತರಾಯಪ್ಪ, ರವಿ ಕುಮಾರ, ಗೋವಿಂದರಾಜು, ವೆಂಕಟೇಶ, ಕೃಷ್ಣಯ್ಯ, ರವಿಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.