ADVERTISEMENT

ಗೌಡರ ಕುಟುಂಬಕ್ಕೆ ಮತ್ತೊಬ್ಬರ ಅವಶ್ಯಕತೆ ಇಲ್ಲ: ಬಾಲಕೃಷ್ಣ

​ಪ್ರಜಾವಾಣಿ ವಾರ್ತೆ
Published 22 ಅಕ್ಟೋಬರ್ 2018, 13:25 IST
Last Updated 22 ಅಕ್ಟೋಬರ್ 2018, 13:25 IST
ಎಚ್.ಸಿ. ಬಾಲಕೃಷ್ಣ
ಎಚ್.ಸಿ. ಬಾಲಕೃಷ್ಣ   

ರಾಮನಗರ: ‘ರಾಮನಗರ ಉಪ ಚುನಾವಣೆಯಲ್ಲಿ ಗೆಲ್ಲಲು ದೇವೇಗೌಡರು–ಎಚ್‌.ಡಿ. ಕುಮಾರಸ್ವಾಮಿ ಕುಟುಂಬಕ್ಕೆ ಮತ್ತೊಬ್ಬರ ಅವಶ್ಯಕತೆಯೇ ಇಲ್ಲ’ ಎಂದು ಕಾಂಗ್ರೆಸ್ ಮುಖಂಡ ಎಚ್‌.ಸಿ. ಬಾಲಕೃಷ್ಣ ಹೇಳಿದರು.

ಸೋಮವಾರ ಇಲ್ಲಿ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ಇಲ್ಲಿನ ಜನರೇ ಎದ್ದು ಅವರ ಪರ ಕುಣಿಯುತ್ತಿದ್ದಾರೆ. ಹೀಗಾಗಿ ಮೈತ್ರಿ ಮಾಡಿಕೊಳ್ಳದಿದ್ದರೂ ಅವರು ಗೆಲ್ಲುತ್ತಿದ್ದರು’ ಎಂದರು.

‘ಉಪ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ. ಅದರ ಅವಶ್ಯಕತೆಯೂ ಅವರಿಗೆ ಇಲ್ಲ ಎನಿಸುತ್ತದೆ. ಮೈತ್ರಿ ಬಗ್ಗೆ ನನ್ನ ವೈಯಕ್ತಿಕ ಅಭಿಪ್ರಾಯ ಹೇಳುವ ಸ್ಥಿತಿಯಲ್ಲಿ ಇಲ್ಲ. ಅದನ್ನು ಪಕ್ಷದ ವೇದಿಕೆಯಲ್ಲಿ ಹೇಳಿದ್ದೇನೆ’ ಎಂದರು.

ADVERTISEMENT

ಬಿಜೆಪಿಗೆ ಹೋಗುವುದಿಲ್ಲ: ‘ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರಿದ್ದ ಶಾಸಕರು ಈಗ ಬಿಜೆಪಿ ಸೇರುತ್ತಾರೆ ಎಂಬುದೆಲ್ಲ ಸುಳ್ಳು ಸುದ್ದಿ. ನಾವೆಲ್ಲರೂ ಎಲ್ಲಿಯೂ ಹಾಗೆ ಹೇಳಿಲ್ಲ. ನಾನು ಈ ಹಿಂದೆ ಬಿಜೆಪಿಯಿಂದ ಶಾಸಕನಾಗಿ ಆಯ್ಕೆ ಆಗಿದ್ದವನು. ನನ್ನನ್ನು ಹಿಂದಿನಿಂದಲೂ ಆ ಪಕ್ಷದವರು ಸಂಪರ್ಕ ಮಾಡುತ್ತಲಿದ್ದಾರೆ. ಆದರೆ ಪದೇ ಪದೇ ಪಕ್ಷ ಬದಲಿಸುವುದು ಗೌರವ ತರುವ ವಿಚಾರವಲ್ಲ’ ಎಂದು ಹೇಳಿದರು.

‘ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಲೋಕಸಭೆಗೆ ಸ್ಪರ್ಧೆ ವಿಚಾರ ಸುಳ್ಳು. ಆ ರೀತಿಯ ಯಾವುದೇ ಚರ್ಚೆ ಆಗಿಲ್ಲ’ ಎಂದು ಸ್ಪಷ್ಟನೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.