ADVERTISEMENT

ಕೃಷಿ ಸೌಲಭ್ಯಗಳ ಅರಿವು ಮೂಡಿಸಿ: ರಾಜಣ್ಣ

​ಪ್ರಜಾವಾಣಿ ವಾರ್ತೆ
Published 8 ಜುಲೈ 2018, 15:47 IST
Last Updated 8 ಜುಲೈ 2018, 15:47 IST
ಚನ್ನಪಟ್ಟಣ ತಾಲ್ಲೂಕಿನ ದೊಡ್ಡಮಳೂರಿನಲ್ಲಿ ಏರ್ಪಡಿಸಿದ್ದ ಕೃಷಿ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ರಾಜಣ್ಣ ಉದ್ಘಾಟಿಸಿದರು
ಚನ್ನಪಟ್ಟಣ ತಾಲ್ಲೂಕಿನ ದೊಡ್ಡಮಳೂರಿನಲ್ಲಿ ಏರ್ಪಡಿಸಿದ್ದ ಕೃಷಿ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ರಾಜಣ್ಣ ಉದ್ಘಾಟಿಸಿದರು   

ಚನ್ನಪಟ್ಟಣ: ಕೃಷಿ ಇಲಾಖೆಯಲ್ಲಿ ಸಿಗುವ ಸೌಲಭ್ಯಗಳ ಬಗ್ಗೆ ಇಲಾಖೆ ಅಧಿಕಾರಿಗಳು ರೈತರಿಗೆ ಅರಿವು ಮೂಡಿಸುವುದು ಅವಶ್ಯ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಚ್.ರಾಜಣ್ಣ ಅಭಿಪ್ರಾಯಪಟ್ಟರು.

ತಾಲ್ಲೂಕಿನ ದೊಡ್ಡಮಳೂರಿನಲ್ಲಿ ಶನಿವಾರ ನಡೆದ ಕೃಷಿ ವಸ್ತು ಪ್ರದರ್ಶನ ಮತ್ತು ರೈತ - ವಿಜ್ಞಾನಿ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕೃಷಿ ಇಲಾಖೆಯಲ್ಲಿ ರೈತರಿಗೆ ಹಲವು ಸೌಲಭ್ಯಗಳು ಇವೆ. ಈ ಬಗ್ಗೆ ರೈತರಲ್ಲಿ ಮಾಹಿತಿ ಇಲ್ಲ. ಕೆಲ ರೈತರು ಮಾತ್ರ ಈ ಸೌಲಭ್ಯ ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.

ADVERTISEMENT

ಮಳೆ ನೀರು ವ್ಯರ್ಥವಾಗದಂತೆ ಹೊಂಡದಲ್ಲಿ ಸಂಗ್ರಹಿಸಿ ಅದನ್ನು ಕೃಷಿಗೆ ಬಳಸುವ ಉದ್ದೇಶದಿಂದ ‘ಕೃಷಿ ಭಾಗ್ಯ’ಯೋಜನೆ ಜಾರಿಗೆ ತರಲಾಗಿದೆ ಎಂದು ತಿಳಿಸಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕಿ ದೀಪಜಾ ಮಾತನಾಡಿ, ಕೃಷಿ ಯೋಜನೆಯಡಿಯಲ್ಲಿ ನೀರು ಸಂಗ್ರಹಣಾ ಹೊಂಡ ರಚನೆ, ನೀರು ಇಂಗದಂತೆ ತಡೆಯಲು ಪಾಲಿಥಿನ್ ಹೊದಿಕೆ, ಹೊಂಡದಿಂದ ನೀರು ಎತ್ತಲು ಡಿಸೇಲ್ ಪಂಪ್ ಸೆಟ್ ಹಾಗೂ ನೀರನ್ನು ಬೆಳೆಗೆ ಹಾಯಿಸಲು ಲಘು ನೀರಾವರಿ, ಕೃಷಿ ಹೊಂಡದ ಸುತ್ತಲೂ ನೆರಳು ಪರದೆ, ಬದು ನಿರ್ಮಾಣಕ್ಕೆ ಹಲವು ಸೌಲಭ್ಯಗಳಿದ್ದು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ತಾಲ್ಲೂಕು ಪಂಚಾಯಿತಿ ಸದಸ್ಯ ಪ್ರಭು, ಕೃಷಿ ಸಮಿತಿ ಅಧ್ಯಕ್ಷ ಬಸವೇಗೌಡ, ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಮಲ್ಲಯ್ಯ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.