ADVERTISEMENT

ಆಧುನಿಕತೆ ಹೆಚ್ಚಿದಂತೆ ಜಾತೀಯತೆ ಹೆಚ್ಚಳ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2017, 4:40 IST
Last Updated 17 ಮಾರ್ಚ್ 2017, 4:40 IST

ಹೊಸನಗರ: ‘ಆಧುನಿಕತೆ ಹೆಚ್ಚಾದಂತೆ ಜಾತಿಯತೆ, ಧರ್ಮಾಂಧತೆಯೂ ಹೆಚ್ಚಾಗುತ್ತಿದೆ’ ಎಂದು ಮುನ್ಸಿಫ್ ನ್ಯಾಯಾಧೀಶ ಪಿ.ಆರ್.ಯೋಗೀಶ್ ವಿಷಾದಿಸಿದರು.

ಕೊಡಚಾದ್ರಿ ಪದವಿ ಕಾಲೇಜಿನಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ,  ತಾಲ್ಲೂಕು ವಕೀಲರ ಸಂಘ ಕೊಡಚಾದ್ರಿ ಕಾಲೇಜಿನ ಸಮಾಜಶಾಸ್ತ್ರ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ ಗುರುವಾರ ಆಯೋಜಿಸಲಾದ ಅನುಸೂಚಿತ ಜಾತಿ, ಬುಡಕಟ್ಟುಗಳ ದೌರ್ಜನ್ಯ ಪ್ರತಿಬಂಧ ಕುರಿತ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ತುಳಿತಕ್ಕೆ ಒಳಗಾದ ಅನುಸೂಚಿತ ಜಾತಿ ಹಾಗೂ ಬುಡಕಟ್ಟು ಜನಾಂಗದವರಿಗೆ ಸಮಾನತೆ, ಸಹಭಾಗಿತ್ವ ನೀಡುವುದರ ಮೂಲಕ ಸಮಾಜದ ಮುಖ್ಯ ವಾಹಿನಿಗೆ ತರುವ ಪ್ರಯತ್ನ ಮಾಡಬೇಕು ಎಂದರು.

ADVERTISEMENT

ಜಾತಿ ನಿಂದನೆ, ದೌರ್ಜನ್ಯ ಪ್ರಕರಣಗಳನ್ನು ಡಿವೈಎಸ್ಪಿಗಿಂತ ಮೇಲಿನ ಪೊಲೀಸ್ ಅಧಿಕಾರಿಗಳು ಮಾತ್ರ ಪ್ರಕರಣ ದಾಖಲಿಸಬಹುದಾಗಿದೆ ಎಂದರು.

ಕೊಡಚಾದ್ರಿ ಕಾಲೇಜಿನ ಪ್ರಾಂಶುಪಾಲ ಡಾ.ಮಾರ್ಷಲ್ ಶರಾಂ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಹಾಯಕ ಸರ್ಕಾರಿ ಅಭಿಯೋಜಕ ಗೋಪಾಲ ನಾಯಕ್, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ವಾಸಪ್ಪ ಗೌಡ, ತಾಲ್ಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ಬಿ.ಪ್ರಶಾಂತ್, ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯ್ತಿ ಅಧ್ಯಕ್ಷ ಕಾಲ್ಸಸಿ ಸತೀಶ್ ವೇದಿಕೆಯಲ್ಲಿ ಹಾಜರಿದ್ದರು.

ವಕೀಲ ಕೆ.ಸಿ.ನಾಗರಾಜ್ ಅನುಸೂಚಿತ ಜಾತಿ, ಬುಡಕಟ್ಟು ಜನಾಂಗ ದೌರ್ಜನ್ಯ ಪ್ರತಿಬಂಧ ಅಧಿನಿಯಮ 1989 ಹಾಗೂ 1995ರ  ಕುರಿತು ಉಪನ್ಯಾಸ ನೀಡಿದರು.

ತಾಲ್ಲೂಕು ಸಮಾಜ ಕಲ್ಯಾಣಧಿಕಾರಿ ಬಿ.ಮಲ್ಲಿಕಾರ್ಜುನ್ ಸ್ವಾಗತಿಸಿದರು. ಕೆ.ಟಿ.ಅಕ್ಷಯ ಕಾರ್ಯಕ್ರಮ ನಿರೂಪಿಸಿದರು. ಸಮಾಜಶಾಸ್ತ್ರ ವೇದಿಕೆಯ ಸಂಚಾಲಕ ಪ್ರೊ.ಪಿ.ನಾಗರಾಜ್ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.