ADVERTISEMENT

ಎಸ್ಸೆಸ್ಸೆಲ್ಸಿ ಮೌಲ್ಯಮಾಪನ: ನಿಷೇಧಾಜ್ಞೆ ಜಾರಿ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2017, 7:15 IST
Last Updated 23 ಏಪ್ರಿಲ್ 2017, 7:15 IST

ಶಿವಮೊಗ್ಗ: ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮಾಲ್ಯಮಾಪನ ಕಾರ್ಯವು ಏ. 20ರಿಂದ ಆರಂಭವಾಗಿದ್ದು, ಮೌಲ್ಯಮಾಪನ ನಡೆಯುವ ಕೇಂದ್ರಗಳ ಸುತ್ತಲಿನ ಭಾಗವನ್ನು ನಿಷೇಧಿತ ಪ್ರದೇಶ ಎಂದು ಜಿಲ್ಲಾಧಿಕಾರಿ ಡಾ.ಎಂ. ಲೋಕೇಶ್ ಆದೇಶ ಹೊರಡಿಸಿದ್ದಾರೆ.

ಶಿವಮೊಗ್ಗದ ಕಸ್ತೂರಬಾ ಬಾಲಕಿಯರ ಕಾಲೇಜು, ಲೊಯಲ್ಲಾ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಸೆಕ್ರೆಡ್ ಹಾರ್ಟ್, ದೇಶೀಯ ಸಂಯುಕ್ತ ಪದವಿ ಪೂರ್ವ ಕಾಲೇಜು, ಮೇರಿ ಇಮ್ಯಾಕ್ಯುಲೇಟ್ ಬಾಲಿಕಾ ಪ್ರೌಢಶಾಲೆ ಹಾಗೂ ರಾಷ್ಟ್ರೀಯ ಬಾಲಕರ ಪ್ರೌಢಶಾಲೆ ಕೇಂದ್ರಗಳ ಸುತ್ತ 200 ಮೀಟರ್‌ವರೆಗಿನ ಪ್ರದೇಶ ವ್ಯಾಪ್ತಿಯಲ್ಲಿ ಬೆಳಿಗ್ಗೆ 8 ರಿಂದ ಸಂಜೆ 6ರವರೆಗೆ ಕಲಂ 144 ಪ್ರಕಾರ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.

ಐದು ಮತ್ತು ಐದಕ್ಕಿಂತ ಹೆಚ್ಚು ಜನರು ಸೇರುವುದನ್ನು ನಿಷೇಧಿಸ ಲಾಗಿದೆ. ಈ ಭಾಗದಲ್ಲಿ ಯಾವುದೇ ಘೋಷಣೆ ಕೂಗುವಂತಿಲ್ಲ. ಕೇಂದ್ರದ ಸುತ್ತ ಟೈಪಿಂಗ್, ಝೆರಾಕ್ಸ್ ಹಾಗೂ ಫ್ಯಾಕ್ಸ್ ಅಂಗಡಿಗಳು ಕಾರ್ಯನಿರ್ವಹಿಸು ವಂತಿಲ್ಲ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.