ADVERTISEMENT

ಗಾಳಿ–ಮಳೆ: ಶಾಲೆಯ ಚಾವಣಿ ಕುಸಿತ

​ಪ್ರಜಾವಾಣಿ ವಾರ್ತೆ
Published 15 ಸೆಪ್ಟೆಂಬರ್ 2017, 10:01 IST
Last Updated 15 ಸೆಪ್ಟೆಂಬರ್ 2017, 10:01 IST

ರಿಪ್ಪನ್‌ಪೇಟೆ: ಎರಡು ದಿನಗಳಿಂದ ಸುರಿದ ಗಾಳಿ–ಮಳೆಗೆ ಬೆಳ್ಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕಲ್ಲುಹಳ್ಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೂರು ಕೊಠಡಿಗಳ ಚಾವಣಿ ಮಂಗಳವಾರ ತಡರಾತ್ರಿ ಕುಸಿದು ಬಿದ್ದಿದೆ. ಅದೃಷ್ಟವಶಾತ್‌ ರಾತ್ರಿ ಸಮಯದಲ್ಲಿ ಈ ದುರಂತ ನಡೆದಿದ ಕಾರಣ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.

ಈ ಕಟ್ಟಡ ಶಿಥಿಲಗೊಂಡಿದ್ದು, ನೆಲಸಮಗೊಳಿಸಿ ಹೊಸ ಕಟ್ಟಡ ನಿರ್ಮಿಸಿಕೊಡುವಂತೆ ಶಾಲಾಭಿವೃದ್ಧಿ ಸಮಿತಿಯು 2015ರಲ್ಲಿ ಜನಪ್ರತಿನಿಧಿಗಳು, ಶಿಕ್ಷಣ ಸಚಿವರಿಗೆ ಹಾಗೂ ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ಆದರೆ, ಈ ಬಗ್ಗೆ ಜನಪ್ರತಿನಿಧಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ದೂರಿದ್ದಾರೆ.

‘ಈ ಶಾಲೆಯಲ್ಲಿ 1ರಿಂದ 7ನೇ ತರಗತಿವರೆಗೆ 60 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಸರ್ಕಾರ ಖಾಸಗಿ ಶಾಲೆಗಳಿಗೆ ಮಣೆ ಹಾಕುವ ಮೂಲಕ ಸರ್ಕಾರಿ ಶಾಲೆಯನ್ನು ನಿರ್ಲಕ್ಷಿಸುತ್ತಿದೆ’ ಎಂದು ಎಸ್‌ಡಿಎಂಸಿ ಅಧ್ಯಕ್ಷ ಕಟ್ಟೆ ಲಕ್ಷ್ಮಣ್‌ ಆರೋಪಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.