ADVERTISEMENT

ನಗರ: ಸರ್ಕಾರಿ ಶಾಲೆಗೆ ಕುಡಿಯುವ ನೀರಿನ ವ್ಯವಸ್ಥೆ

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2017, 9:13 IST
Last Updated 19 ಸೆಪ್ಟೆಂಬರ್ 2017, 9:13 IST

ಹೊಸನಗರ: ತಾಲ್ಲೂಕಿನ ನಗರ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಶಾಲೆಗೆ ಜನಸೇವಕ ಚಾರಿಟಬಲ್ ಟ್ರಸ್ ಹಾಗೂ ನಮ್ಮೂರು ಪ್ರತಿಷ್ಠಾನ ಜಂಟಿಯಾಗಿ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಿಕೊಟ್ಟಿದೆ.

ನಗರದ ಸರ್ಕಾರಿ ಬಾಲಕರ ಶಾಲೆಯಲ್ಲಿ ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ಪರದಾಡುವಂತಾಗಿತ್ತು. ಇದನ್ನು ಗಮನಿಸಿ ₹ 60 ಸಾವಿರ ವೆಚ್ಚದಲ್ಲಿ ಪಂಪ್‌ಸೆಟ್‌, ಸಿಂಟೆಕ್ಸ್ ಜೊತೆಗೆ ನೀರಿನ ಪೈಪ್‌ಲೈನ್‌ ವ್ಯವಸ್ಥೆಯನ್ನು ಟ್ರಸ್ಟ್‌ನಿಂದ ಮಾಡಲಾಗಿದೆ.

ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿದ ನಮ್ಮೂರು ಪ್ರತಿಷ್ಠಾನದ ನಮ್ಮೂರು ರಾಜಶೇಖರ್, ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಸುಗಮ ವ್ಯಾಸಾಂಗಕ್ಕೆ ಸರ್ಕಾರೇತರ ಸಂಘ–ಸಂಸ್ಥೆಗಳು ಮತ್ತು ಸಾರ್ವಜನಿಕರು ನೆರವು ನೀಡುವ ಅಗತ್ಯವಿದೆ ಎಂದರು.

ADVERTISEMENT

ಕ್ರೀಡಾ ಸಾಮಗ್ರಿ ವಿತರಣೆ ಗ್ರಾಮೀಣ ಮಕ್ಕಳ ಉತ್ತಮ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿರುವ ಜನಸೇವಕ ಚಾರಿಟಬಲ್ ಟ್ರಸ್ಟ್‌ ನೂಲಿಗ್ಗೇರಿ ಸರ್ಕಾರಿ ಪ್ರಾಥಮಿಕ ಶಾಲೆಗೆ ವಾಲಿಬಾಲ್, ಥ್ರೋಬಾಲ್, ನೆಟ್‌ ಸೇರಿದಂತೆ ವಿವಿಧ ಕ್ರೀಡಾ ಸಾಮಗ್ರಿಗಳನ್ನು ಕೊಡುಗೆಯಾಗಿ ನೀಡಿದೆ. ಚಿಕ್ಕಪೇಟೆ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಊಟದ ತಟ್ಟೆ ಮತ್ತು ಲೋಟಗಳನ್ನು ಉಚಿತವಾಗಿ ನೀಡಿದೆ.

ಕ್ರೀಡಾ ಸಾಮಗ್ರಿ ವಿತರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜನಸೇವಕ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ್, ಸಂಘ–ಸಂಸ್ಥೆಗಳು ಉಚಿತವಾಗಿ ನೀಡುವ ಕೊಡುಗೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕೋರಿದರು. ಟ್ರಸ್ಟ್ ಪದಾಧಿಕಾರಿಗಳಾದ ಅಶೋಕ್, ಪ್ರದೀಪ್, ವಿಶ್ವನಾಥ ಎಂ, ರವಿಶೆಟ್ಟಿ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.