ADVERTISEMENT

ಬ್ಲೂವೇಲ್‌ ವಿಡಿಯೊ ಗೇಮ್‌ ಪಾಲಕರು ಎಚ್ಚರಿಕೆ ವಹಿಸಲಿ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2017, 9:16 IST
Last Updated 12 ಸೆಪ್ಟೆಂಬರ್ 2017, 9:16 IST
ಆನವಟ್ಟಿಯ ತಲಗಡ್ಡೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಶಾಸಕ ಮಧು ಬಂಗಾರಪ್ಪ ಮಾತನಾಡಿದರು.
ಆನವಟ್ಟಿಯ ತಲಗಡ್ಡೆ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಶಾಸಕ ಮಧು ಬಂಗಾರಪ್ಪ ಮಾತನಾಡಿದರು.   

ಆನವಟ್ಟಿ: ‘ಬ್ಲೂವೇಲ್‌ ಅಪಾಯಕಾರಿ ವಿಡಿಯೊ ಗೇಮ್‌ ಗ್ರಾಮೀಣ ಭಾಗಕ್ಕೂ ಆವರಿಸುತ್ತಿದೆ. ಹೀಗಾಗಿ ಪೋಷಕರು ಮಕ್ಕಳ ಕೈಗೆ ಮೊಬೈಲ್ ಕೊಡಬಾರದು. ಮಕ್ಕಳು ಮೊಬೈಲ್‌ನಲ್ಲಿ ಏನು ಮಾಡುತ್ತಿದ್ದಾರೆ ಎನ್ನುವುದರ ಬಗ್ಗೆ ನಿಗಾ ವಹಿಸಬೇಕು’ ಎಂದು ಶಾಸಕ ಮಧು ಬಂಗಾರಪ್ಪ ಕಿವಿಮಾತು ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ, ಗ್ರಾಮ ಪಂಚಾಯ್ತಿ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆಶ್ರಯದಲ್ಲಿ ತಲಗಡ್ಡೆ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಶಿಕ್ಷಕರು ಪಾಠ ಮಾಡುವುದರ ಜೊತೆಗೆ ಮಕ್ಕಳ ಬಗ್ಗೆ ಕಾಳಜಿ ವಹಿಸಬೇಕು. ವಿದ್ಯಾರ್ಥಿಗಳು ಶಾಲೆಗೆ ಮೊಬೈಲ್‌ ತರದಂತೆ ಎಚ್ಚರ ವಹಿಸಬೇಕು. ಶಾಲೆಯಲ್ಲಿ ಯಾವುದೇ ಲೋಪಗಳು ಆಗದಂತೆ ಶಿಕ್ಷಕರು ಗಮನ ಕೊಡಬೇಕು’ ಎಂದು ಹೇಳಿದರು.

ADVERTISEMENT

‘ತಾಲ್ಲೂಕಿನ ಹಲವು ಗ್ರಾಮಗಳ ಶಾಲೆಗಳಲ್ಲಿ ಕೊಠಡಿಗಳ ಸಮಸ್ಯೆ ಇದೆ. ಬರುವ ಅನುದಾನ ಸಾಲುತ್ತಿಲ್ಲ. ಹೀಗಾಗಿ ಶಾಲೆಗಳಲ್ಲಿ ಕೊರತೆ ಇರುವ ಕೊಠಡಿಗಳ ಪಟ್ಟಿ ತಯಾರಿಸಿದ್ದು, ₹ 43 ಕೋಟಿ ಕ್ರಿಯಾಯೋಜನೆ ಸಿದ್ಧಪಡಿಸಿ ಸರ್ಕಾರಕ್ಕೆ ಕಳುಹಿಸಿಕೊಟ್ಟಿದ್ದೇನೆ’ ಎಂದು ತಿಳಿಸಿದರು.

ಶಿವಾನಂದ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ಪಂಚಾಯ್ತಿ ಸದಸ್ಯ ಶಿವಲಿಂಗೇಗೌಡ, ತಾಲ್ಲೂಕು ಪಂಚಾಯ್ತಿ ಉಪಾಧ್ಯಕ್ಷ ಸುರೇಶ್ ಹಾವಣ್ಣನವರ್, ಸದಸ್ಯೆ ಅಂಜಲಿ ಸಂಜೀವ್, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಕಲ್ಪನಾ, ಎಸ್‌.ಡಿ.ಎಂ.ಸಿ ಅಧ್ಯಕ್ಷ ಅಣ್ಣಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಮಂಜುನಾಥ, ಸಮನ್ವಯ ಅಧಿಕಾರಿ ಎಚ್.ಜಿ ಆಂಜನೇಯ, ಪ್ರಕಾಶ ಮಡ್ಲೂರು, ಎಚ್.ಎಚ್ ಬಸವರಾಜಪ್ಪ, ಶಿವಕುಮಾರ ಕೆ.ಸಿ, ಪ್ರೇಮಕುಮಾರ್, ಅವರೂ ಹಾಜರಿದ್ದರು. ಶಿಕ್ಷಕ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.