ADVERTISEMENT

ಭ್ರಷ್ಟಾಚಾರ ದೇಶದ ಬಹುದೊಡ್ಡ ಸಮಸ್ಯೆ

ಉದ್ಘಾಟನಾ ಸಮಾರಂಭದಲ್ಲಿ ಸಿವಿಲ್ ನ್ಯಾಯಾಧೀಶ ಸೋಮಶೇಖರ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2017, 3:38 IST
Last Updated 19 ಏಪ್ರಿಲ್ 2017, 3:38 IST
ಹೊಸನಗರ:  ‘ಪರಿಸರ ರಕ್ಷಣೆ, ಭ್ರಷ್ಟಾಚಾರ ವಿರೋಧಿ  ನೀತಿ ಹಾಗೂ ಮಾನವ ಹಕ್ಕುಗಳ ಹೋರಾಟಕ್ಕೆ ಪ್ರತಿಯೊಬ್ಬರೂ  ಬದ್ಧರಾಗಬೇಕು’ ಎಂದು ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶ ಸೋಮಶೇಖರ ಸಿ. ಬಾದಾಮಿ ಹೇಳಿದರು.
 
ರಾಮಕೃಷ್ಣ ವಿದ್ಯಾ ಸಂಸ್ಥೆಯ ವಿವೇಕಾನಂದ ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಆಶ್ರಯದಲ್ಲಿ ದೆಹಲಿಯ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ತಾಲ್ಲೂಕು ಘಟಕವನ್ನು ಈಚೆಗೆ ಉದ್ಘಾಟಿಸಿ ಅವರು ಮಾತನಾಡಿದರು.
 
 ತಾಲ್ಲೂಕು ಘಟಕದ ನೂತನ ಅಧ್ಯಕ್ಷ ದುಮ್ಮಾ ರೇವಣಪ್ಪ ಗೌಡ ಅಧ್ಯಕ್ಷತೆ ವಹಿಸಿದ್ದರು. ರಾಷ್ಟ್ರೀಯ ಅಧ್ಯಕ್ಷ ಡಾ.ಮೋಹನ್ ರಾವ್ ನಲ್ವಡೆ, ರಾಜ್ಯ ಸಂಚಾಲಕರು ಶಕ್ತಿ ಪಾಟೀಲ್, ಮುನ್ಸಿಫ್ ನ್ಯಾಯಾಧೀಶ ಯೋಗೀಶ್, ತಹಶೀಲ್ದಾರ್ ಚಂದ್ರಶೇಖರ ನಾಯ್ಕ, ಅಬಕಾರಿ ನಿರೀಕ್ಷಕ ಸುಜಾತ, ಕ್ಷೇತ್ರ ಶಿಕ್ಷಣಾಧಿಕಾರಿ ವೀರಭದ್ರಪ್ಪ, ರಾಮಕೃಷ್ಣ ವಿದ್ಯಾ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ದೇವರಾಜ್  ಹಾಜರಿದ್ದರು.
 
ಬೇಳೂರು ದೇವೇಂದ್ರಪ್ಪ ಸ್ವಾಗತಿಸಿದರು. ಕಾರ್ಯದರ್ಶಿ ಗಂಗಾಧರಯ್ಯ ಕಾರ್ಯಕ್ರಮ ನಿರೂಪಿಸಿದರು. ಬಂದಗಳಲೆ ಮಲ್ಲಿಕಾರ್ಜುನ ಗೌಡ ವಂದಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.